ಉತ್ತರ ಪ್ರದೇಶ: ಸಂಸ್ಕೃತದಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ!
ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಇನ್ನು ಮುಂದಿನ ದಿನಗಳಲ್ಲಿ ಸಂಸ್ಕೃತ ಭಾಷೆಯಲ್ಲಿಯೂ ಮಾಧ್ಯಮ ಪ್ರಕಟಣೆ ಹೊರಡಿಸಲಿದೆ.

Published On :
ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಇನ್ನು ಮುಂದಿನ ದಿನಗಳಲ್ಲಿ ಸಂಸ್ಕೃತ ಭಾಷೆಯಲ್ಲಿಯೂ ಮಾಧ್ಯಮ ಪ್ರಕಟಣೆ ಹೊರಡಿಸಲಿದೆ.
ಜೂ.17 ರಂದು ಮೊದಲ ಬಾರಿಗೆ ಸಂಸ್ಕೃತದಲ್ಲಿ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ. ಸಂಸ್ಕೃತ ಭಾರತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಯೋಗಿ ಆದಿತ್ಯನಾಥ್ ಸಂಸ್ಕೃತ ಭಾರತದ ಡಿಎನ್ಎಯ ಒಂದು ಭಾಗ ಎಂದು ಹೇಳಿದ್ದರು.
ಸಂಸ್ಕೃತ ಈಗ ಧಾರ್ಮಿಕ ಮಂತ್ರ, ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿದೆ. ವಿಜ್ಞಾನ ಎಲ್ಲಿ ಕೊನೆಯಾಗುತ್ತದೋ ಅಲ್ಲಿ ಸಂಸ್ಕೃತ ಪ್ರಾರಂಭವಾಗುತ್ತದೆ. ಪ್ರತಿನಿತ್ಯದ ವ್ಯವಹಾರದಲ್ಲಿ ನಾವು ಸಂಸ್ಕೃತವನ್ನು ಬಳಕೆ ಮಾಡದೇ ಅದನ್ನು ದುರ್ಬಲಗೊಳಿಸಿದ್ದೇವೆ ಎಂದು ಆದಿತ್ಯನಾಥ್ ಹೇಳಿದ್ದರು. ಉತ್ತರ ಪ್ರದೇಶದಲ್ಲಿ ಅಂದಾಜು 25 ನಿಯತಕಾಲಿಕೆಗಳು ಪ್ರಕಟವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶSanskritಸಂಸ್ಕೃತಯೋಗಿ ಆದಿತ್ಯನಾಥ್ ಸರ್ಕಾರYogi Adityanath governmentpress releaseಮಾಧ್ಯಮ ಪ್ರಕಟಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


