ಒಂದು ದೇಶ, ಒಂದು ಚುನಾವಣೆ ಕುರಿತು ಪ್ರಧಾನಿ ಜೊತೆ ಸರ್ವಪಕ್ಷ ಸಭೆಗೆ ಮಮತಾ, ಉದ್ಧವ್ ಠಾಕ್ರೆ ಗೈರು
ಒಂದು ದೇಶ, ಒಂದು ಚುನಾವಣೆ ಕುರಿತು ಪ್ರಧಾನಿ ಜೊತೆ ಸರ್ವಪಕ್ಷ ಸಭೆಗೆ ಗೈರಾಗಲು ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗುವ ಸಾಧ್ಯತೆ ಇದೆ.

Published On :
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಕುರಿತು ಪ್ರಧಾನಿ ಜೊತೆ ಸರ್ವಪಕ್ಷ ಸಭೆಗೆ ಗೈರಾಗಲು ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗುವ ಸಾಧ್ಯತೆ ಇದೆ.
ಈ ಕುರಿತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಪತ್ರ ಬರೆದಿರುವ ತೃಣ ಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಒಂದು ದೇಶ ಒಂದು ಚುನಾವಣೆ ವಿಷಯದ ಕುರಿತು ಸಭೆ ಆಯೋಜಿಸುವ ಬಗ್ಗೆ ನಮಗೆ ಮಾಹಿತಿ ಬಂದ ವೇಳೆಗೆ ಸಮಯ ಕಡಿಮೆ ಇತ್ತು, ಈ ಬಗ್ಗೆ ಸಲಹೆಗಳನ್ನು ಪಡೆಯುವುದಕ್ಕೆ ಕೇಂದ್ರ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಹೇಳಿದ್ದಾರೆ.
ಇನ್ನು ಪೂರ್ನನಿಯೋಜಿತ ಕಾರ್ಯಕ್ರಮ ಇರುವುದರಿಂದ ಶಿವಸೇನೆಯ ಮುಖ್ಯಸ್ಥರೂ ಸಹ ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಜೂ.19 ರಂದು ಒಂದು ದೇಶ, ಒಂದು ಚುನಾವಣೆ ಕುರಿತು ಸರ್ವಪಕ್ಷ ಸಭೆಯನ್ನು ಪ್ರಧಾನಿ ಮೋದಿ ಕರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉದ್ಧವ್ ಠಾಕ್ರೆUddhav ThackerayMamata Banerjeeಮಮತಾ ಬ್ಯಾನರ್ಜಿಒಂದು ದೇಶOne nationone electionಒಂದು ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


