ಹಿಮಾಚಲ: ಕಂದಕಕ್ಕೆ ಉರುಳಿದ ಬಸ್, 25 ಮಂದಿ ಸಾವು, 35 ಪ್ರಯಾಣಿಕರಿಗೆ ಗಾಯ
ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 25 ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ...

Published On :
ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 25 ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.
ಭೀಕರ ಅಪಘಾತದಲ್ಲಿ 35 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಜಾರಾ ಪ್ರದೇಶದಿಂದ ಕುಲ್ಲು ಜಿಲ್ಲೆಯ ಗಡಗುಶಾನಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ 300 ಮೀಟರ್ ಆಳವಾದ ಕಂದಕಕ್ಕೆ ಉರುಳಿದೆ ಎಂದು ಕುಲ್ಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಾಲಿನಿ ಅಗ್ನಿಹೋತ್ರಿ ಅವರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


