ಕೆಆರ್ ಎಸ್ ಡ್ಯಾಂನಿಂದ ಮಂಡ್ಯ ಜಿಲ್ಲೆಗೆ 2 ಟಿಎಂಸಿ ನೀರು ಬಿಡುವಂತೆ ಶೇಖಾವತ್, ಕಾವೇರಿ ಜಲ ನಿರ್ವಹಣಾ ಮಂಡಳಿಗೆ ಡಿವಿಎಸ್ ಪತ್ರ
ಮಂಡ್ಯ ಜಿಲ್ಲೆಗೆ ಕೆಆರ್ ಎಸ್ ಜಲಾಶಯದಿಂದ 2 ಟಿಎಂಸಿ ನೀರು ಬಿಡುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಹಾಗೂ ಕಾವೇರಿ ಜಲ ನಿರ್ವಹಣಾ ಮಂಡಳಿ ಅಧ್ಯಕ್ಷ ಮಸೂದ್ ಹುಸೇನ್ ಅವರಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಪತ್ರ ಬರೆದಿದ್ದಾರೆ.

Published On :
ನವದೆಹಲಿ: ಮಂಡ್ಯ ಜಿಲ್ಲೆಗೆ ಕೆಆರ್ ಎಸ್ ಜಲಾಶಯದಿಂದ 2 ಟಿಎಂಸಿ ನೀರು ಬಿಡುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಹಾಗೂ ಕಾವೇರಿ ಜಲ ನಿರ್ವಹಣಾ ಮಂಡಳಿ ಅಧ್ಯಕ್ಷ ಮಸೂದ್ ಹುಸೇನ್ ಅವರಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಪತ್ರ ಬರೆದಿದ್ದಾರೆ.
ಮಂಡ್ಯ ಜಿಲ್ಲೆಯ ರೈತರು ನೀರಿಲ್ಲದೆ ಸಂಕಷ್ಟದಲ್ಲಿದ್ದು, ಬೆಳೆದು ನಿಂತ ಪೈರನ್ನು ಉಳಿಸಿಕೊಳ್ಳಲು ತಕ್ಷಣ 2 ಟಿಎಂಸಿ ನೀರನ್ನು ಕೆಆರ್ ಎಸ್ ಜಲಾಶಯದಿಂದ ಹರಿಸುವಂತೆ ಸಂಸದೆ ಸುಮಲತಾ ಅಂಬರೀಷ್ ಹಾಗೂ ಸಣ್ಣ ನೀರಾವರಿ ಸಚಿವ ಎಸ್ . ಪುಟ್ಟರಾಜು ತಮ್ಮ ಬಳಿ ಮನವಿ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.
ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಶೇಖಾವತ್ ಹಾಗೂ ಕಾವೇರಿ ಜಲ ನಿರ್ವಹಣಾ ಮಂಡಳಿ ಅಧ್ಯಕ್ಷ ಮಸೂದ್ ಹುಸೇನ್ ವರಿಗೆ ಪತ್ರ ಬರೆದಿದ್ದು, ಬೆಳೆಗೆ ನೀರು ಕೇಳುತ್ತಿರುವ ರೈತರ ಪರವಾಗಿ ನಿರ್ಧಾರ ತೆಗೆದುಕೊಂಡು 2 ಟಿಎಂಸಿ ನೀರನ್ನು ಮಂಡ್ಯ ಜಿಲ್ಲೆಗೆ ಹರಿಸುವಂತೆ ಕೇಳಿಕೊಂಡಿರುವುದಾಗಿ ಸದಾನಂದಗೌಡ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiDV Sadananda GowdawaterನೀರುKRS Damಕೆಆರ್ ಎಸ್ ಡ್ಯಾಂಮಂಡ್ಯ ಜಿಲ್ಲೆMandya district ನವ ದೆಹಲಿಡಿ. ವಿ. ಸದಾನಂದಗೌಡ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


