ರಾಜಸ್ಥಾನ: ಟಿಕ್ ಟಾಕ್ ವಿಡಿಯೋ ಚಾಲೆಂಜ್ ಮಾಡಲು ಹೋದ ಬಾಲಕ ಆತ್ಮಹತ್ಯೆ
ಮೊಬೈಲ್ ಆ್ಯಪ್ ಟಿಕ್ ಟಾಕ್ ನಲ್ಲಿ ವಿಡಿಯೋ ಚಾಲೆಂಜ್ ಮಾಡಲು ಹೋಗಿ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ತಾನದ ಕೊಟಾದಲ್ಲಿ ನಡೆದಿದೆ

Published On :
ಕೊಟಾ: ಮೊಬೈಲ್ ಆ್ಯಪ್ ಟಿಕ್ ಟಾಕ್ ನಲ್ಲಿ ವಿಡಿಯೋ ಚಾಲೆಂಜ್ ಮಾಡಲು ಹೋಗಿ
12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೊಟಾದಲ್ಲಿ ನಡೆದಿದೆ.
ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡಲು ಹೋದ ಬಾಲಕ ತನನ್ನು ತಾನೇ ಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಹೆಚ್ಚಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.
ಬಾಲಕ ನೇಣು ಬಿಗಿದುಕೊಳ್ಳುವುದಕ್ಕೂ ಮುನ್ನ ಮಂಗಳಸೂತ್ರವನ್ನು ಧರಿಸಿ, ಕೈಗೆ ಬಳೆಗಳನ್ನು ಹಾಕಿಕೊಂಡಿದ್ದಾನೆ. ಬಳಿಕ ದಪ್ಪವಾದ ಲೋಕದ ಸರಪಳಿಯಿಂದ ಸ್ನಾನ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ನಾನಗೃಹದ ಛಾವಣಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಆತ ರಾತ್ರಿಯಿಡೀ ಟಿಕ್ ಟಾಕ್ ಬಳಸುತ್ತಿದ್ದ ಎಂದು ಬಾಲಕನ ಕುಟುಂಬ ಸದಸ್ಯರು ಹೇಳಿದ್ದಾರೆ.
ಟಿಕ್ ಟಾಕ್ ಮಾಡದಿದ್ದರೆ ನನ್ನ ಮಗ ಜೀವಂತವಾಗಿ ಇರುತಿದ್ದ ಎಂದ ನೊಂದ ಬಾಲಕನ ತಂದೆ ಕಣ್ಣಿರಿಟ್ಟಿದ್ದಾರೆ. ಬಾಲಕನನ್ನು ಆಸ್ಪತ್ರೆಗೆ ತಂದ ನಂತರ ಮೃತಪಟ್ಟನೆಂದು ಘೋಷಿಸಲಾಗಿದ್ದು, ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


