ಯಾವುದೇ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳಲ್ಲ: ಸಿಪಿಎಂ ಮುಖಂಡ ಕೊಡಿಯೇರಿ ಬಾಲಕೃಷ್ಣನ್
ಅತ್ಯಾಚಾರ ಆರೋಪ ಹೊಂದಿರುವ ಮಗನನ್ನು ರಕ್ಷಿಸಲು ನಾನು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಎಂದು ಕೇರಳ ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ...

Published On :
ತಿರುವನಂತಪುರ: ಅತ್ಯಾಚಾರ ಆರೋಪ ಹೊಂದಿರುವ ಮಗನನ್ನು ರಕ್ಷಿಸಲು ನಾನು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ, ಎಂದು ಕೇರಳ ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಹೇಳಿದ್ದಾರೆ.
ಹಿರಿಯ ಮಗನಾದ ಬಿನೊಯ್ ಕೊಡಿಯೇರಿ ವಿರುದ್ಧ 33 ವರ್ಷದ ಮಹಿಳೆ ದೂರು ದಾಖಲಿಸಿರುವ ಪ್ರಕರಣದ ಸಂಬಂಧ ಪ್ರತಿಕ್ರಿಯಿಸಿರುವ ಅವರು, ನನ್ನ ಪಕ್ಷ (ಸಿಪಿಐ-ಎಂ) ಅಥವಾ ನಾನು ಬಿನೊಯ್ ಕೊಡಿಯೇರಿಯನ್ನು ರಕ್ಷಿಸುವುದಿಲ್ಲ. ಅವನು ವಯಸ್ಕ. ಅವನು ಸ್ವತಂತ್ರವಾಗಿ ಬದುಕುತ್ತಾನೆ ಮತ್ತು ತಾನು ಮಾಡಿರುವ ಕಾರ್ಯಗಳಿಗೆ ಜವಾಬ್ದಾರನಾಗಿರುತ್ತಾನೆ ಎಂದು ಖಡಕ್ ಆಗಿ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಅತ್ಯಾಚಾರ ವಿಚಾರವಾಗಿ ವಿವಾದ ಭುಗಿಲೆದ್ದ ನಂತರ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಕೊಡಿಯೇರಿ ಬಾಲಕೃಷ್ಣನ್ ಪ್ರತಿಕ್ರಿಯೆ ನೀಡಿದ್ದಾರೆ.ಮುಂಬೈನ ಮಾಜಿ ಬಾರ್ ನರ್ತಕಿ ಮದುವೆಯಾಗುವುದಾಗಿ ಭರವಸೆ ನೀಡಿದ್ದ ಬಿನೊಯ್ ಕೊಡಿಯೇರಿ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಅಲ್ಲದೆ ಇಬ್ಬರಿಗೆ 8 ವರ್ಷದ ಮಗನಿದ್ದಾನೆ ಎಂದು ಹೇಳಿಕೊಂಡಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


