ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ನಿಧನ: ಮೋದಿ, ಅಮಿತ್ ಶಾ ಸಂತಾಪ
ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ನಿಧನರಾಗಿದ್ದಾರೆ. ರಾಜ್ಯಸಭಾ ಸದಸ್ಯರೂ ಆಗಿದ್ದ ಮದನ್ ಲಾಲ್ ಸೈನಿಗೆ 75 ವರ್ಷ ವಯಸ್ಸಾಗಿತ್ತು.

Published On :
ನವದೆಹಲಿ: ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ನಿಧನರಾಗಿದ್ದಾರೆ. ರಾಜ್ಯಸಭಾ ಸದಸ್ಯರೂ ಆಗಿದ್ದ ಮದನ್ ಲಾಲ್ ಸೈನಿಗೆ 75 ವರ್ಷ ವಯಸ್ಸಾಗಿತ್ತು.
ಶ್ವಾಸಕೋಶದ ಸೋಂಕಿನಿಂದ ಶನಿವಾರ ಜೈಪುರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆರೋಗ್ಯ ಪರಿಸ್ಥಿತಿ ಕ್ಷಿಣಿಸಿದ್ದರಿಂದ ದೆಹಲಿಗೆ ಸ್ಥಳಾಂತರಿಸಲಾಗಿತ್ತು.
ಮದನ್ ಲಾಲ್ ಆರೋಗ್ಯ ತೀರಾ ಕ್ಷೀಣಿಸಿದ ನಂತರ ಐಸಿಯುಗೆ ಸ್ಥಳಾಂತರಿಸಲಾಯಿತು. ಆದರೆ, ಇಂದು ಸಂಜೆ 7.09ರಲ್ಲಿ ನಿಧನರಾಗಿದ್ದಾರೆ ಎಂದು ಏಮ್ಸ್ ಮೂಲಗಳು ತಿಳಿಸಿವೆ.
ಸೈನಿ ಕಳೆದ ವರ್ಷ ರಾಜಸ್ಥಾನ ಬಿಜೆಪಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಮಾಜಿ ಶಾಸಕ ಹಾಗೂ ಆರ್ ಎಸ್ ಎಸ್ ಸ್ವಯಂ ಸೇವಕರಾಗಿದ್ದ ಅವರು ಬಿಜೆಪಿ ಕಿಸಾನ್ ಮೋರ್ಚಾ ಸೇರಿದಂತೆ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಸೈನಿ ನಿಧನದಿಂದ ಪಕ್ಷಕ್ಕೆ ನಷ್ಟ ಉಂಟಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸೈನಿ ಅವರನ್ನು ಜನ ಸೇವಕ ಎಂದು ಕರೆದಿರುವ ಅಮಿತ್ ಶಾ, ರಾಜಸ್ಥಾನದಲ್ಲಿ ಬಿಜೆಪಿ ಬಲಗೊಳ್ಳಲು ಪ್ರಮುಖ ಪಾತ್ರ ವಹಿಸಿದ್ದರು ಎಂದು ಸ್ಮರಿಸಿ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ , ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತಿತರರು ಸೈನಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿpassed awayನಿಧನPM Modiಪ್ರಧಾನಿ ಮೋದಿಅಮಿತ್ ಶಾಸಂತಾಪAmit ShaRajastahnMadan Lal SainiCondolence ರಾಜಸ್ಥಾನಮದನ್ ಲಾಲ್ ಸೈನಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


