ಜಾರ್ಖಂಡ್: ಥಳಿತಕ್ಕೊಳಗಾದ ಮುಸ್ಲಿಂ ಯುವಕ ಸಾವು, 11 ಮಂದಿ ಬಂಧನ
ಕಳ್ಳತನದ ಶಂಕೆ ಮೇಲೆ ಆಕ್ರೋಶಿತ ಗುಂಪಿನಿಂದ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದ 24 ವರ್ಷದ ಯುವಕ ಮೃತಪಟ್ಟಿದ್ದು ಘಟನೆ ಸಂಬಂಧ ...

Published On :
ಸೆರೈಕೆಲಾ-ಖಾರ್ಸವಾನ್ (ಜಾರ್ಖಂಡ್): ಕಳ್ಳತನದ ಶಂಕೆ ಮೇಲೆ ಆಕ್ರೋಶಿತ ಗುಂಪಿನಿಂದ ಹಿಗ್ಗಾಮುಗ್ಗ ಥಳಿಸಿಕೊಂಡಿದ್ದ 24 ವರ್ಷದ ಯುವಕ ಮೃತಪಟ್ಟಿದ್ದು ಘಟನೆ ಸಂಬಂಧ 11 ಮಂದಿಯನ್ನು ಬಂಧಿಸಲಾಗಿದೆ.
ಜಾರ್ಖಂಡ್ ರಾಜ್ಯದ ಖಾರ್ಸಾವಾನ್ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಯುವಕನಿಗೆ ಥಳಿಸಿದ ಗುಂಪು ಒತ್ತಾಯಪೂರ್ವಕವಾಗಿ ಯುವಕನ ಕೈಯಲ್ಲಿ ಜೈ ಶ್ರೀರಾಮ್ ಮತ್ತು ಜೈ ಹನುಮಾನ್ ಎಂದು ಹೇಳಿಸುತ್ತಿರುವ ವಿಡಿಯೊ ಪೊಲೀಸರಿಗೆ ಸಿಕ್ಕಿದೆ. ಕಳೆದ 18 ರಂದು ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತೀವ್ರ ಹಲ್ಲೆಗೀಡಾಗಿದ್ದ 24 ವರ್ಷದ ತಬ್ರೇಜ್ ಅನ್ಸಾರಿಯನ್ನು ಜಾರ್ಖಂಡ್ ನ ಜಮ್ಷೆಡ್ ಪುರದಲ್ಲಿನ ಟಾಟಾ ಮೈನ್ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದು ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ನೇಮಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಅವರು ಸಿನಿ ಮತ್ತು ಖಾರಸ್ವಾನ್ ಪೊಲೀಸ್ ಠಾಣೆಯ ಅಧಿಕಾರಿಗಳಾಗಿದ್ದಾರೆ.
ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಂದು ವಿಡಿಯೋದಲ್ಲಿ ತಬ್ರೇಜ್ ಗೆ ಮರದ ತುಂಡಿನಿಂದ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಮತ್ತೊಂದು ವಿಡಿಯೋದಲ್ಲಿ ಜೈ ರಾಮ್, ಜೈ ಹನುಮನ್ ಅಂತ ಹೇಳುವಂತೆ ಒತ್ತಾಯಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


