ಗುಜರಾತ್‌ನಿಂದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿಯಿಂದ ಸಚಿವ ಡಾ.ಜೈಶಂಕರ್ ಸ್ಪರ್ಧೆ
ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಡಾ ಎಸ್ ಜೈಶಂಕರ್ ಅವರು ...

Published On :
ನವದೆಹಲಿ: ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಡಾ ಎಸ್ ಜೈಶಂಕರ್ ಅವರು ಗುಜರಾತ್‌ನಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಗುಜರಾತ್‌ನಿಂದ ಮೇಲ್ಮನೆಗೆ ನಡೆಯುವ ಉಪ ಚುನಾವಣೆಯಲ್ಲಿ ಮತ್ತೊಂದು ಸ್ಥಾನಕ್ಕೆ ಜುಜಾಲ್ಜಿ ಮಾತೂರ್ಜಿ ಠಾಕೂರ್ ಅವರನ್ನು ಕಣಕ್ಕಿಳಿಸಲು ಪಕ್ಷದ ಕೇಂದ್ರ ಚುನಾವಣಾ ಸಮಿತಿ ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮೇಲ್ಮನೆ ಸದಸ್ಯರಾದ ಅಮಿತ್ ಶಾ ಮತ್ತು ಸ್ಮೃತಿ ಇರಾನಿ 17ನೇ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಗುಜರಾತ್‌ನ ಎರಡು ರಾಜ್ಯಸಭಾ ಸ್ಥಾನಗಳು ಖಾಲಿಯಾಗಿವೆ
ಮತ್ತೋರ್ವ ರಾಜ್ಯಸಭಾ ಸದಸ್ಯ ರವಿಶಂಕರ್ ಪ್ರಸಾದ್ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಡಾ ಜೈಶಂಕರ್ ಅವರು ನಾಮಪತ್ರ ಸಲ್ಲಿಸಲು ಇಂದು ಅಹ್ಮದಾಬಾದ್‌ಗೆ ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


