ಮುಂದುವರೆದ ಎನ್ಸಿಫಾಲಿಟೀಸ್ ಮರಣ ಮೃದಂಗ: ಮುಜಾಫರ್ ಪುರ ಸಾವಿನ ಸಂಖ್ಯೆ 131ಕ್ಕೆ ಏರಿಕೆ!
ಬಿಹಾರದಲ್ಲಿ ಎನ್ಸಿಫಾಲಿಟೀಸ್ ಸೋಂಕು ಮರಣ ಮೃದಂಗ ಮುಂದುವರೆದಿದ್ದು, ಮುಜಾಫರ್ ಪುರವೊಂದರಲ್ಲೇ ಸಾವಿನ ಸಂಖ್ಯೆ 131ಕ್ಕೆ ಏರಿಕೆಯಾಗಿದೆ.

Published On :
ಪಾಟ್ನಾ: ಬಿಹಾರದಲ್ಲಿ ಎನ್ಸಿಫಾಲಿಟೀಸ್ ಸೋಂಕು ಮರಣ ಮೃದಂಗ ಮುಂದುವರೆದಿದ್ದು, ಮುಜಾಫರ್ ಪುರವೊಂದರಲ್ಲೇ ಸಾವಿನ ಸಂಖ್ಯೆ 131ಕ್ಕೆ ಏರಿಕೆಯಾಗಿದೆ.
ಮೆದುಳು ಸಂಬಂಧಿತ ಖಾಲೆಗೆ ಬಿಹಾರದಲ್ಲಿ ಮಕ್ಕಳ ಸಾವಿನ ಸರಣಿ ಮುಂದುವರೆದಿದ್ದು, ಮುಜಾಫರ್ ಪುರದಲ್ಲಿ ಮತ್ತಷ್ಟು ಮಕ್ಕಳು ಸಾವನ್ನಪ್ಪಿದ್ದಾರೆ. ಆ ಮೂಲಕ ಮುಜಾಫರ್ ಪುರವೊಂದರಲ್ಲೇ ಸಾವಿನ ಸಂಖ್ಯೆ 131ಕ್ಕೆ ಏರಿಕೆಯಾಗಿದ್ದು, ಈ ಪೈಕಿ 85 ಮಕ್ಕಳು ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 111 ಮಂದಿ ಸಾವನ್ನಪ್ಪಿದ್ದು, ಕೇಜ್ರಿವಾಲ್ ಆಸ್ಪತ್ರೆಯಲ್ಲಿ 20 ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮಾರಣಾಂತಿಕ ಎನ್ಸಿಫಾಲಿಟೀಸ್ ಸೋಂಕು ಬಿಹಾರದ ಒಟ್ಟು 18 ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದು, ಮುಜಾಫರ್ ಪುರ ಜಿಲ್ಲೆಯೊಂದರಲ್ಲೇ 437 ಪ್ರಕರಣಗಳು ಕಂಡುಬಂದಿವೆ ಎಂದು ಕೇಂದ್ರೀಯ ಆರೋಗ್ಯ ಇಲಾಖೆ ತಂಡದ ಅಧಿಕಾರಿ ಮನೋಜ್ ಜಲಾನಿ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


