ದೇಶ

ಮಹಾನಗರ ಪಾಲಿಕೆ ಅಧಿಕಾರಿಯನ್ನು ಥಳಿಸಿದ ಬಿಜೆಪಿ ಶಾಸಕ ಆಕಾಶ್ ವಿಜಯ್ ವರ್ಗೀಯ: ವಿಡಿಯೋ ಸೆರೆ

ನವ ಭಾರತದ ಬಗ್ಗೆ ಢಾಳಾಗಿ ಮಾತನಾಡುವ ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡುವ ರೀತಿಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ಮಹಾನಗರ ಪಾಲಿಕೆ ಅಧಿಕಾರಿಯನ್ನು ಥಳಿಸಿದ ಬಿಜೆಪಿ ಶಾಸಕ ಆಕಾಶ್ ವಿಜಯ್ ವರ್ಗೀಯ: ವಿಡಿಯೋ ಸೆರೆ
ಮಹಾನಗರ ಪಾಲಿಕೆ ಅಧಿಕಾರಿಯನ್ನು ಥಳಿಸಿದ ಬಿಜೆಪಿ ಶಾಸಕ ಆಕಾಶ್ ವಿಜಯ್ ವರ್ಗೀಯ: ವಿಡಿಯೋ ಸೆರೆ
Published On :
ನವ ಭಾರತದ ಬಗ್ಗೆ ಢಾಳಾಗಿ ಮಾತನಾಡುವ ಬಿಜೆಪಿ ನಾಯಕರಿಗೆ ಮುಜುಗರ ಉಂಟುಮಾಡುವ ರೀತಿಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. 
ಬಿಜೆಪಿ ಶಾಸಕ ಆಕಾಶ್ ವಿಜಯ್ ವರ್ಗೀಯ ಅವರು ಮಹಾನಗರ ಪಾಲಿಕೆ ಅಧಿಕಾರಿಯನ್ನು ಥಳಿಸಿರುವ ವಿಡಿಯೋ ಸೆರೆಯಾಗಿದೆ. 
ಮಹಾನಗರ ಪಾಲಿಕೆಯ ಅಧಿಕಾರಿ ಅತಿಕ್ರಮಣ ವಿರೋಧಿ ಅಭಿಯಾನಕ್ಕಾಗಿ ಇಂದೋರ್ ಗೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ಹಿರಿಯ ನಾಯಕ ಕೈಲಾಶ್ ವಿಜಯ್ ವರ್ಗೀಯ ಪುತ್ರ ಆಕಾಶ್ ಕ್ರಿಕೆಟ್ ಬ್ಯಾಟ್ ನಿಂದ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. 
ಒತ್ತುವರಿ ವಿರೋಧಿ ಅಭಿಯಾನಕ್ಕೆ ಆಗಮಿಸಿದ್ದ ಅಧಿಕಾರಿ ಗಂಜಿ ಕಾಂಪೌಂಡ್ ಏರಿಯಾದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ನೆಲಸಮ ಮಾಡಲು ಮುಂದಾದಾಗ ಈ ಘಟನೆ ನಡೆದಿದೆ. ಘಟನೆ ನಡೆದಿರುವುದು ವರದಿಯಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.