ಕಾಶ್ಮೀರ: ಉಗ್ರದಾಳಿಯಲ್ಲಿ ಹುತಾತ್ಮರಾದ ಪೋಲೀಸ್ ಅಧಿಕಾರಿ ಮನೆಗೆ ಅಮಿತ್ ಶಾ ಭೇಟಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಂತ್‌ನಾಗ್ ಎಸ್‌ಎಚ್‌ಒ ಹುತಾತ್ಮ ಅರ್ಷದ್ ಖಾನ್ ಅವರ ಮನೆಗೆ ಭೇಟಿ ನೀಡಿದ್ದಾರೆ.

Published On :
ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಂತ್‌ನಾಗ್ ಎಸ್‌ಎಚ್‌ಒ ಹುತಾತ್ಮ ಅರ್ಷದ್ ಖಾನ್ ಅವರ ಮನೆಗೆ ಭೇಟಿ ನೀಡಿದ್ದಾರೆ.
ಜೂನ್ 12 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಅರ್ಷದ್ ಖಾನ್ ಪ್ರಾಣ ಕಳೆದುಕೊಂಡಿದ್ದರು.
ಅಮಿತ್ ಶಾ ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಎರಡು ದಿನಗಳ ಕಾಲದ ಅಧಿಕೃತ ಭೇಟಿಗಾಗಿ ಜಮ್ಮು ಕಾಶ್ಮೀರಕ್ಕೆ ತೆರಳಿದ್ದಾರೆ.
ಅರ್ಷದ್ ಖಾನ್ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ ಶಾ ಯೋಧರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ.ನಿಮ್ಮ ಕುಟುಂಬದೊಡನೆ ನಾನಿದ್ದೇನೆ ಎಂದು ಭರವಸೆ ಇತ್ತಿದ್ದಾರೆ.
ಬುಧವಾರ ಅವರು ಅಮರನಾಥ ಯಾತ್ರೆಯ ಭದ್ರತಾ ವ್ಯವಸ್ಥೆಗಳ ಪರಿಶೀಲನಾ ಸಭೆಯನ್ನು ನಡೆಸಿದರು ಮತ್ತು ಹಿಂಸಾಚಾರ ರಹಿತ ಯಾತ್ರೆಯನ್ನು ಖಾತ್ರಿಪಡಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


