ಕಾಶ್ಮೀರದಲ್ಲಿ ಮತ್ತೆ ಎನ್ಕೌಂಟರ್: ಓರ್ವ ಉಗ್ರನ ಸೆದೆಬಡಿದ ಸೇನೆ, ತೀವ್ರ ಶೋಧ ಕಾರ್ಯ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಇಂದು ಮತ್ತೆ ಸೇನಾಪಡೆಗಳ ಗುಂಡಿಗೆ ಓರ್ವ ಉಗ್ರ ಹತನಾಗಿದ್ದಾನೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಹೆಚ್ಚಾಗಿದ್ದು, ಇಂದು ಮತ್ತೆ ಸೇನಾಪಡೆಗಳ ಗುಂಡಿಗೆ ಓರ್ವ ಉಗ್ರ ಹತನಾಗಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಬದಗಾಮ್ ಜಿಲ್ಲೆಯ ಕ್ರಾಲ್ ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಪಡೆಗಳು ಕೂಡಲೇ ಅಲ್ಲಿಗೆ ಧಾವಿಸಿವೆ. ಸೇನೆ ಪ್ರದೇಶವನ್ನು ಸುತ್ತುವರೆಯುತ್ತಿದ್ದಂತೆಯೇ ಸೈನಿಕರತ್ತ ಉಗ್ರರು ಗುಂಡಿನ ಸುರಿಮಳೆ ಗರೆದಿದ್ದಾರೆ. ಈ ವೇಳೆ ಸೈನಿಕರೂ ಕೂಡ ಪ್ರತಿದಾಳಿ ಮಾಡಿದ್ದು, ಓರ್ವ ಉಗ್ರ ಹತನಾಗಿದ್ದಾನೆ.
ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಮಾಹಿತಿ ಇದ್ದು, ಅವಿತಿರುವ ಉಗ್ರರಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಅಂತೆಯೇ ಪ್ರಸ್ತುತ ಹತನಾಗಿರುವ ಉಗ್ರನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಉಗ್ರರುಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirterroristಭಾರತೀಯ ಸೇನೆBudgam encounterಬದಗಾಮ್ ಎನ್ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


