ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ಪ್ರಕರಣ: ಮಧ್ಯಪ್ರದೇಶ ಬಿಜೆಪಿ ಶಾಸಕನಿಗೆ ಜಾಮೀನು
ಅಧಿಕಾರಿಯೊಬ್ಬರಿಗೆ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಬಂಧಿತನಾಗಿದ್ದ ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ವಿಜಯವರ್ಗಿಯಾ ಅವರನ್ನು ಭಾನುವಾರ ಬೆಳಿಗ್ಗೆ ಸ್ಥಳೀಯ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

Published On :
ಇಂದೋರ್: ಅಧಿಕಾರಿಯೊಬ್ಬರಿಗೆ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಬಂಧಿತನಾಗಿದ್ದ ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ವಿಜಯವರ್ಗಿಯಾ ಅವರನ್ನು ಭಾನುವಾರ ಬೆಳಿಗ್ಗೆ ಸ್ಥಳೀಯ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಭೋಪಾಲ್‌ನ ನ್ಯಾಯಾಲಯದಿಂದ ಜಾಮೀನು ಆದೇಶ ಇಂದೋರ್ ಗೆ ಲುಪಿದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ.
ಭೋಪಾಲ್ ಮೂಲದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸುರೇಶ್ ಸಿಂಗ್ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರ ಪುತ್ರ ಶಾಸಕ ಆಕಾಶ್ ಅವರ ಮೇಲೆ ಹಲ್ಲೆ ಹಾಗೂ ಕಾನೂನುಬಾಹಿರ ಪ್ರತಿಭಟನೆ ನಡೆಸಿದ ಆರೋಪ ಇತ್ತು. ಇದೀಗ ಈ ಪ್ರಕರಣದಲ್ಲಿ ಜಾಮೀನು ದೊರಕಿದೆ.
ಹಲ್ಲೆ ಪ್ರಕರಣದ ಸಂಬಂಧ 50,000 ರೂ.ಗಳ ವೈಯಕ್ತಿಕ ಬಾಂಡ್ ಹಾಗೂ ಇನ್ನಿತರೆ ಪ್ರಕರಣಗಳಲ್ಲಿ 20,000 ರೂ.ಬಾಂಡ್ ನೀಡಿ ಜಾಮೀನು ಪಡೆಯಲಾಗಿದೆ.
ಇಂದೋರ್ -3 ಅಸೆಂಬ್ಲಿ ವಿಭಾಗವನ್ನು ಪ್ರತಿನಿಧಿಸುವ ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಆಕಾಶ್ ವಿಜಯವರ್ಗಿಯಾ (34) ಕಳೆದ ಬುಧವಾರ ಪುರಸಭೆ ಅಧಿಕಾರಿ ಧಿರೇಂದ್ರ ಸಿಂಗ್ ಬೈಸ್ ಅವರ ಮೇಲೆ ಕ್ರಿಕೆಟ್ ಬ್ಯಾಟ್‌ನಿಂದ ಹಲ್ಲೆ ಮಾಡಿದ್ದು ಇದು ಟಿವಿ ಕ್ಯಾಮರಾಗಳಲ್ಲಿಯೂ ಸೆರೆಯಾಗಿತ್ತು. ಶಿಥಿಲಗೊಂಡಿದ್ದ ಮನೆಯೊಂದನ್ನು ನೆಲಸಮ ಮಾಡುವುದಕ್ಕೆ ಶಾಸಕ ಆಕಾಶ್ ವಿರೋಧಿಸಿ ಈ ಕೃತ್ಯ ಎಸಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Madhya Pradeshಮಧ್ಯಪ್ರದೇಶbatassault caseಹಲ್ಲೆ ಪ್ರಕರಣಕ್ರಿಕೆಟ್ ಬ್ಯಾಟ್Akash Vijayvargiyaಆಕಾಶ್ ವಿಜಯವರ್ಗಿಯಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


