ಕಾಶ್ಮೀರದಲ್ಲಿ ಎನ್ಕೌಂಟರ್; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಯೋಧರು
ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೋರ್ವ ಹತನಾಗಿದ್ದಾನೆ.

Published On :
ಶ್ರೀನಗರ: ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೋರ್ವ ಹತನಾಗಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಯೋಧರು ಇಂದು ಬೆಳಗ್ಗೆ ಕಾರ್ಯಾಚರಣೆ ಕೈಗೊಂಡಿದ್ದು ಉಗ್ರನೋರ್ವನನ್ನು ಹೊಡೆದುರುಳಿಸಿದ್ದಾರೆ.
ಭಾರತೀಯ ಯೋಧರನ್ನು ಕಂಡ ಕ್ಷಣ ಉಗ್ರರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದರು. ಸದ್ಯ ಉಗ್ರನೋರ್ವ ಮೃತಪಟ್ಟಿದ್ದು ಆತನ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಭಾರತೀಯ ಯೋಧರು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


