ಜಮ್ಮು ಕಾಶ್ಮೀರದ ಎಸ್ಸಿ, ಎಸ್ಟಿ ಸಮುದಾಯಕ್ಕೆ ಉದ್ಯೋಗ ಮೀಸಲು: 370ನೇ ವಿಧಿ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು
ಜಮ್ಮು ಕಾಶ್ಮೀರದಲ್ಲಿನ ಆರ್ಥಿಕ ದುರ್ಬಲ ವರ್ಗ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಕುರಿತು ಕಾನೂನು ಜಾರಿಗೆ ಕೇಂದ್ರ ಸರ್ಕಾರ....

Published On :
ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಆರ್ಥಿಕ ದುರ್ಬಲ ವರ್ಗ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವ ಕುರಿತು ಕಾನೂನು ಜಾರಿಗೆ ಕೇಂದ್ರ ಸರ್ಕಾರ ಅನುಮತಿಸಿದೆ.
ಪ್ರಧಾನಿ ಮೋದಿ, ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನೊಳಗೊಂಡ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಲಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಜೇಟ್ಲಿ "ಸಂವಿಧಾನದ (77ನೇ ತಿದ್ದುಪಡಿ)1995 ರ ಕಾಯ್ದೆ, ಸಂವಿಧಾನದ (103ನೇ ತಿದ್ದುಪಡಿ) 2019 ಕಾಯ್ದೆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತ ಸಂವಿಧಾನದ ಸಂಬಂಧಿತ ನಿಬಂಧನೆಗಳನ್ನು ಅನ್ವಯಿಸುವ ಉದ್ದೇಶದಿಂದ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಕಲ್ಪಿಸುವ 370ನೇ ವಿಧಿಯಪರಿಚ್ಛೇದ (1)ರ ಅಡಿಯಲ್ಲಿ 2019 ರ ತಿದ್ದುಪಡಿ ಆದೇಶ,ದ ಅನುಸಾರ ಮೀಸಲಾತಿ ನಿಯಮಾವಳಿಗಳನ್ನು ಅಳವಡಿಸಿಕೊಳ್ಲಲಾಗುತ್ತಿದೆ" ಎಂದರು.
ಇನ್ನು ಈ ಆದೇಶದ ಪ್ರತಿಗೆ ರಾಷ್ಟ್ರಪತಿ ಅಂಕಿತ ಹಾಕುವ ಮೂಲಕ ಅಧಿಕೃತ ಕಾನೂನು ಜಾರಿಯಾಗಿಸಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


