ವಿಂಗ್ ಕಮಾಂಡರ್ ಅಭಿನಂದನ್ ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್
ಪಾಕಿಸ್ತಾನದಿಂದ ಶುಕ್ರವಾರ ಸಂಜೆ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್...

Published On :
ನವದೆಹಲಿ: ಪಾಕಿಸ್ತಾನದಿಂದ ಶುಕ್ರವಾರ ಸಂಜೆ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಶನಿವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಿದ್ದಾರೆ.
ಸದ್ಯ ದೆಹಲಿಯ ಭಾರತೀಯ ವಾಯುಪಡೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿನಂದನ್ ವರ್ಧಮಾನ್ ಅವರನ್ನು ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಿದ್ದು, ಸುಮಾರು 60 ಗಂಟೆಗಳ ಪಾಕಿಸ್ತಾನದಲ್ಲಿದ್ದ ವೇಳೆ ನಡೆದ ಘಟನೆಗಳನ್ನು ವಿವರಿಸಿದ್ದಾರೆ ಎನ್ನಲಾಗಿದೆ.
ರಕ್ಷಣಾ ಸಚಿವೆಯ ಜತೆ ವಾಯುಪಡೆಯ ಹಿರಿಯ ಅಧಿಕಾರಿಗಳು ಸಹ ಇದ್ದರು.
ಇಂದು ಬೆಳಗ್ಗೆಯಷ್ಟೇ ಅಭಿನಂದನ್ ಅವರು ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೋಹಾರನ್ನು ಭೇಟಿಯಾಗಿದ್ದು, ಪಾಕಿಸ್ತಾನದಲ್ಲಿ ತಾನು ಸೆರೆಯಾಗಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಅಭಿನಂದನ್ ವರ್ಧಮಾನ್ ಅವರು ಆಸ್ಪತ್ರೆಯಲ್ಲಿ ಇನ್ನೂ ಹಲವು ಪರೀಕ್ಷೆಗಳಿಗೆ ಒಳಪಡಬೇಕಿದ್ದು, ಭಾನುವಾರದವರೆಗೆ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


