ಇಮ್ರಾನ್ ಗೆ ನೊಬೆಲ್ ಪ್ರಶಸ್ತಿ ಕೊಡಿ: ಪಾಕ್ ಒತ್ತಾಯ; ಸಿಕ್ಕರೂ ಚಹರೆ ಬದಲಾಗದು: ರಾಮ್ ಮಾಧವ್
ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ನಿರ್ವಹಣೆ ಮಾಡಿದ್ದಕ್ಕಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಆಗ್ರಹಿಸಲಾಗಿದೆ.

Published On :
ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ನಿರ್ವಹಣೆ ಮಾಡಿದ್ದಕ್ಕಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಆಗ್ರಹಿಸಲಾಗಿದೆ.
ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿ ಸೆಕ್ರೆಟೇರಿಯೆಟ್ ನಲ್ಲಿ ಇಮ್ರಾನ್ ಖಾನ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಒತ್ತಾಯಿಸಲಾಗಿದೆ. ನಿರ್ಣಯವನ್ನು ಮಂಡಿಸಿರುವ ಮಾಹಿತಿ ಸಚಿವ ಫವಾದ್ ಚೌಧರಿ, ಭಾರತದ ನಾಯಕತ್ವ ಯುದ್ಧ ಉನ್ಮಾದ ಹಾಗೂ ಆಕ್ರಮಣಶೀಲತೆಯ ವರ್ತನೆಯಿಂದಾಗಿ ಎರಡು ಅಣ್ವಸ್ತ್ರ ಹೊಂದಿರುವ ರಾಷ್ಟ್ರಗಳು ಯುದ್ಧದ ಸನಿಹದಲ್ಲಿದ್ದವು ಎಂದು ಆರೋಪಿಸಿದ್ದಾರೆ.
ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಸ್ಥಿತಿಯನ್ನು ಇಮ್ರಾನ್ ಖಾನ್ ಅತ್ಯುತ್ತಮವಾನಿ ನಿರ್ವಹಿಸಿದರಷ್ಟೇ ಅಲ್ಲದೇ ಶಾಂತಿಯೆಡೆಗೆ ಕೊಂಡೊಯ್ದರು, ಆದ್ದರಿಂದ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಟ್ವಿಟರ್ ನಲ್ಲಿ #NobelPeacePrizeForImranKhan ಹ್ಯಾಷ್ ಟ್ಯಾಗ್ ಟಾಪ್ ಟ್ರೆಂಡ್ ಆಗಿತ್ತು.
2020 ನೇ ಸಾಲಿನಲ್ಲಿ ಇಮ್ರಾನ್ ಖಾನ್ ಗೆ ಶಾಂತಿ ಪ್ರಶಸ್ತಿ ನೀಡಬೇಕೆಂದು ನಾರ್ವೆಯ ನೊಬೆಲ್ ಸಮಿತಿ ನಾಮನಿರ್ದೇಶನ ಸಮಿತಿಗೂ ಆನ್ ಲೈನ್ ಅರ್ಜಿ ಸಲ್ಲಿಸಲಾಗಿದೆ.
ಇಮ್ರಾನ್ ಗೆ ನೊಬೆಲ್ ಸಿಕ್ಕರೂ ಪಾಕ್ ಚಹರೆ ಬದಲಾಗದು: ರಾಮ್ ಮಾಧವ್
ಭಾರತೀಯ ವಿಂಗ್ ಕಮಾಂಡರ್ ಅಭಿನಂದನ್ ಅವರ ಬಿಡುಗಡೆಗೆ ತೆಗೆದುಕೊಂಡ ಐತಿಹಾಸಿಕ ನಿರ್ಧಾರಕ್ಕಾಗಿ ಒಂದು ವೇಳೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ತೆಗೆದುಕೊಂಡರೂ ಅದರಿಂದ ಪಾಕ್ ಗೆ ಯಾವ ಪ್ರಯೋಜನವೂ ಅಗುವುದಿಲ್ಲ, ಚಹರೆಯೂ ಬದಲಾಗದು ಎಂದು ಬಿಜೆಪಿ ನಾಯಕ ರಾಮ್ ಮಾಧವ್ ಶನಿವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಇಮ್ರಾನ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕು ಎಂಬ ಬೇಡಿಕೆ ಪಾಕಿಸ್ತಾನದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದೆ ಒಂದು ವೇಳೆ ಅದು ಅವರಿಗೆ ದೊರೆಕಿದರೂ ಪಾಕಿಸ್ತಾನದಲ್ಲಿ ಹುಟ್ಟಿದ ಭಯೋತ್ಪಾದನೆಯನ್ನು, ಅದು ತನ್ನ ರಾಜ್ಯ ನೀತಿಯಂತೆ ಬಳಕೆ ಮಾಡುತ್ತಿರುವುದು ಎಲ್ಲರಿಗೂ ಗೊತ್ತಿದೆ ಇದರಿಂದ ಪಾಕ್ ಗೆ ಯಾವುದೆ ಪ್ರಯೋಜನವಾಗದು, ಜಗತ್ತು ಪಾಕಿಸ್ತಾನವನ್ನು ನೋಡುವ ದೃಷ್ಟಿಕೋನವೂ ಬದಲಾಗದು ಎಂದು ಅವರು ಹೇಳಿದರು. ಇಂಡಿಯಾ ಟುಡೇ ಸಮಾವೇಶದಲ್ಲಿ ಮಾತನಾಡಿದ ಅವರು, ಇಮ್ರಾನ್ ಖಾನ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕು ಎಂದು ಪಿಟಿಐ ಪಕ್ಷದ ಕಾರ್ಯಕರ್ತರು ಮತ್ತು ಜನರಿಂದ ಒತ್ತಾಯ ಹೆಚ್ಚಾಗಿ ಕೇಳಿ ಬರುತ್ತಿದೆ ಅವರ ಪಕ್ಷದಲ್ಲೂ ಒತ್ತಡ ತೀವ್ರಗೊಂಡಿದೆ ಅವರು ಅದನ್ನು ತೆಗೆದುಕೊಂಡರೂ ಇದು ನಿಜವಾಗಿಯೂ ಪಾಕಿಸ್ತಾನಕ್ಕೆ ಸಹಾಯ ಮಾಡುವುದೇ? " ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


