ಅಭಿನಂದನ್ ವರ್ಧಮಾನ್ ಹೆಸರಿನಲ್ಲಿ ಹರಿದಾಡುತ್ತಿದೆ ನಕಲಿ ಟ್ವಿಟರ್ ಖಾತೆ!
ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಹೆಸರಿನಲ್ಲಿ ಟ್ವೀಟರ್ ನಲ್ಲಿ ನಕಲಿ ಖಾತೆಯೊಂದು ಹರಿದಾಡುತ್ತಿದೆ ಎಂಬುದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಸುಮಾರು 60 ಗಂಟೆಗಳ ಕಾಲ ಪಾಕಿಸ್ತಾನ ಸೈನಿಕರ ವಶದಲ್ಲಿದ್ದು,ನಂತರ ಭಾರತಕ್ಕೆ ವಾಪಾಸ್ ಆಗಿ ವಾಯುಪಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಹೆಸರಿನಲ್ಲಿ ಟ್ವೀಟರ್ ನಲ್ಲಿ ನಕಲಿ ಖಾತೆಯೊಂದು ಹರಿದಾಡುತ್ತಿದೆ ಎಂಬುದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.
@Abhinandan_wc ಹೆಸರಿನಲ್ಲಿ ಕಳೆದ ತಿಂಗಳು ಈ ಟ್ವಿಟರ್ ಖಾತೆ ತೆರೆಯಲ್ಪಟ್ಟಿದ್ದು, 2000 ಪಾಲೋವರ್ಸ್ ಹೊಂದಿದ್ದೆ. ತಮಿಳು ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಅನೇಕ ಪೋಸ್ಟ್ ಗಳನ್ನು ಇದರಿಂದಲೇ ಮಾಡಲಾಗಿದೆ.
ಆದಾಗ್ಯೂ, ಇದು ವರ್ಧಮಾನ್ ಅವರಿಗೆ ಸಂಬಂಧಿಸಿದ ಟ್ವೀಟರ್ ಖಾತೆ ಅಲ್ಲ ಎಂದು ಸರ್ಕಾರದ ಮೂಲಗಳು ಸ್ಪಷ್ಪಪಡಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


