ಮೋದಿ ಹವಾ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರ್ಪಡೆ!
ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ರಿವಾಬಾ ಜಡೇಜಾ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Published On :
ಅಹಮದಾಬಾದ್: ಟೀಂ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ರಿವಾಬಾ ಜಡೇಜಾ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಸೇರಲು ನನಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಫೂರ್ತಿ. ಕೇವಲ ನಮ್ಮ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ನನ್ನ ಸೇವೆ ಸಲ್ಲಿಸಲು ಬಿಜೆಪಿ ಸೇರಿದ್ದರಿಂದ ನನಗೆ ಅವಕಾಶ ದೊರಕಿದೆ ಅಂತ ನಾನು ನಂಬಿದ್ದೇನೆ ಎಂದರು.
ಇನ್ನು ಪತಿ ರವೀಂದ್ರ ಜಡೇಜಾ ಬಗ್ಗೆ ಪ್ರಶ್ನಿಸಿದ್ದಕ್ಕೆ, ಜಡೇಜಾ ಅವರು ನಮ್ಮ ರಜಪೂತ್ ಸಮುದಾಯಕ್ಕೆ ಮಾತ್ರ ಹೆಮ್ಮೆಯಲ್ಲ, ಯುವ ಜನಾಂಗಕ್ಕೂ ಹೆಮ್ಮೆ. ಆದರೆ ಬಿಜೆಪಿ ಸೇರ್ಪಡೆಯಾಗುವ ವಿಚಾರ ನನ್ನ ವೈಯಕ್ತಿಕ ನಿರ್ಧಾರ. ಇದರಿಂದ ಸಮಾಜದಲ್ಲಿ ನನ್ನನ್ನು ನಾನು ಗುರುತಿಸಿಕೊಳ್ಳುವುದಕ್ಕೆ ನೆರವಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


