ಉಗ್ರರ ವಿರುದ್ಧ ಮತ್ತೆ ಮುಗಿಬಿದ್ದ ಸೇನೆ, ತ್ರಾಲ್ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಿದ ಉಗ್ರರ ಹೆಡೆ ಮುರಿಕಟ್ಟಲು ಸೇನೆ ಮುಂದಾಗಿದ್ದು, ತ್ರಾಲ್ ನಲ್ಲಿ ನಡೆದ...

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಿದ ಉಗ್ರರ ಹೆಡೆ ಮುರಿಕಟ್ಟಲು ಸೇನೆ ಮುಂದಾಗಿದ್ದು, ತ್ರಾಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
ಪುಲ್ವಾಮ ಜಿಲ್ಲೆಯ ತ್ರಾಲ್ ನ ರೇಶಿ ಮೊಹಲ್ಲಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನಾಪಡೆಗಳೂ ಕೂಡಲೇ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಸೈನಿಕರನ್ನು ನೋಡುತ್ತಿದ್ದಂತೆಯೇ ಉಗ್ರರು ಗುಂಡಿನ ಸುರಿಮಳೆ ಆರಂಭಿಸಿದ್ದಾರೆ. ಸೇನಾಪಡೆಗಳೂ ಕೂಡ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರು ಹತನಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ಕಟ್ಟಡವನ್ನು ಸುತ್ತುವರೆದಿರುವ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಂತೆಯೇ ಘಟನಾ ಪ್ರದೇಶದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಸೇನಾ ಮೂಲಗಳ ಪ್ರಕಾರ ಕಟ್ಟಡದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದೆ ಮೂರರಿಂದ ನಾಲ್ಕು ಉಗ್ರರು ಅವಿತಿರುವ ಶಂಕೆ ಇದೆ ಎನ್ನಲಾಗಿದೆ. ಕಾಶ್ಮೀರ ಪೊಲೀಸರು ಮತ್ತು ಸಿಆರ್ ಪಿಎಫ್ ಸೈನಿಕರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and KashmirCRPFಭಾರತೀಯ ಸೇನೆಸಿಆರ್ ಪಿಎಫ್Tral Encounterತ್ರಾಲ್ ಲ್ ಎನ್ ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


