ದೇಶ

ಭಯೋತ್ಪಾದಕರು ಪಾತಾಳದಲ್ಲೇ ಅಡಗಿದ್ದರೂ ಬಿಡುವುದಿಲ್ಲ: ಪ್ರಧಾನಿ ಮೋದಿ

ಪುಲ್ವಾಮಾ ಉಗ್ರ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದಕರ ದಮನ ಮಾಡುವ ಪಣ ತೊಟ್ಟಿದ್ದು ಉಗ್ರರು ಎಲ್ಲೇ ಅಡಗಿದ್ದರೂ ಹುಟ್ಟಡಗಿಸದೇ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಭಯೋತ್ಪಾದಕರು ಪಾತಾಳದಲ್ಲೇ ಅಡಗಿದ್ದರೂ ಬಿಡುವುದಿಲ್ಲ: ಪ್ರಧಾನಿ ಮೋದಿ
ನರೇಂದ್ರ ಮೋದಿ
Published On :
ಅಹಮದಾಬಾದ್: ಪುಲ್ವಾಮಾ ಉಗ್ರ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದಕರ ದಮನ ಮಾಡುವ ಪಣ ತೊಟ್ಟಿದ್ದು ಉಗ್ರರು ಎಲ್ಲೇ ಅಡಗಿದ್ದರೂ ಹುಟ್ಟಡಗಿಸದೇ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಅಹಮದಾಬಾದ್ ನಲ್ಲಿ ಮಾತನಾಡಿದ ಮೋದಿ, ಒಂದೊಂದು ಏಟಿಗೂ ತಿರುಗೇಟು ಕೊಡುವುದು ನನ್ನ ಜಾಯಮಾನ. ಉಗ್ರರು ಏಳನೇ ಪಾತಾಳದಲ್ಲೇ ಅಡಗಿರಲಿ ಅವರನ್ನು ಹುಡುಕಿ ಎಳೆದು ಹೊಡೆದುಹಾಕುತ್ತೇನೆ ಎಂದು ಭಯೋತ್ಪಾದಕರ ವಿರುದ್ಧ ಸಿಡಿದಿದ್ದಾರೆ.
ವೈರಿಗಳನ್ನು ಅವರದ್ದೇ ನೆಲದಲ್ಲಿ ಹೊಡೆಯುವುದು ನಮ್ಮ ನೀತಿ. ಹೆಚ್ಚು ಕಾಲ ನಾನು ತಾಳ್ಮೆಯಿಂದ ಇರಲು ಇಷ್ಟಪಡುವುದಿಲ್ಲ. ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ನಮ್ಮ ಸೇನೆ ನೀಡುವ ಸಲಹೆಗಳನ್ನು ತಾನು ಪಾಲಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಪುಲ್ವಾಮಾ ಉಗ್ರ ದಾಳಿ ಬಳಿಕ ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲಾಕೋಟ್ ಗೆ ನುಗ್ಗಿ ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಕ್ಯಾಂಪ್ ಮೇಲೆ ಬಾಂಬ್ ದಾಳಿ ನಡೆಸಿತ್ತು. ಇದು ಜಗತ್ತಿನ ಮಟ್ಟಿಗೆ ಭಾರತದ ತಾಕತ್ತು ಏನೆಂದು ಪರಿಚಯವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.