ಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಿಂದ ಜಾರ್ಖಂಡ್ಗೆ ಹೊರಟಿದ್ದ ಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Published On :
ಅಮರಾವತಿ: ಬೆಂಗಳೂರಿನಿಂದ ಜಾರ್ಖಂಡ್ಗೆ ಹೊರಟಿದ್ದ ಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಈ ರೈಲು ಬೆಂಗಳೂರಿನ ಯಶವಂತಪುರದಿಂದ ಜಾರ್ಖಂಡ್ ನ ಜಮ್ಶೆಡ್ಪುರಕ್ಕೆ ಹೊರಟಿತ್ತು. ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಸಮೀಪ ರೈಲಿನ ಕ್ಯಾಟರಿಂಗ್ ಬೋಗಿಯಲ್ಲಿ (ಅಡುಗೆ ಕೋಣೆ) ಬೆಂಕಿ ಕಾಣಿಸಿಕೊಂಡಿದೆ. ತಡರಾತ್ರಿ 2 ಗಂಟೆ ವೇಳೆಗೆ ಅಗ್ನಿಅವಘಡ ನಡೆದಿದೆ. ಕ್ಷಣ ಮಾತ್ರದಲ್ಲಿ ಬೆಂಕಿ ಇಡೀ ಬೋಗಿ ಆವರಿಸಿತ್ತು.
ತಪ್ಪಿದ ಭಾರಿ ಅನಾಹುತ
ಇನ್ನು ರೈಲಿನ ಅಡುಗೆ ಕೋಣೆಯ ಬೋಗಿಗೆ ಬೆಂಕಿ ಅವರಿಸುತ್ತಿದ್ದಂತೆಯೇ ಎಚ್ಚೆತ್ತ ರೈಲ್ವೇ ಸಿಬ್ಬಂದಿ ಕೂಡಲೇ ರೈಲಿನಿಂದ ಬೋಗಿಯನ್ನು ಬೇರ್ಪಡಿಸುವ ಮೂಲಕ ಮುಂದಾಗಬಹುದಾದ ದುರಂತವನ್ನು ತಪ್ಪಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ನಂತರ ರೈಲಿನಲ್ಲಿದ್ದ ಪ್ರಯಾಣಿಕರು ಒಮ್ಮೆ ಆತಂಕಕ್ಕೆ ಒಳಗಾಗಿದ್ದರು. ಬಳಿಕ ಕೆಲ ಹೊತ್ತಿನಲ್ಲೇ ಪರಿಸ್ಥಿತಿ ತಿಳಿಯಾಯಿತು. ಈ ಅಗ್ನಿ ಅವಘಡದಿಂದ ಈ ಭಾಗದಲ್ಲಿ ರೈಲ್ವೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೆಲ ರೈಲುಗಳು ತಡವಾಗಿ ಸಂಚರಿಸಿವೆ. ಬೆಂಕಿ ಆರಿದ ನಂತರ ರೈಲನ್ನು ಬೇರೆಡೆ ತೆಗೆದುಕೊಂಡು ಹೋಗಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian RailwaysAmaravathiಅಮರಾವತಿಭಾರತೀಯ ರೈಲ್ವೇfire accidentಅಗ್ನಿ ಅವಘಡYesvantpur-Tatanagar Superfast Express Trainಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


