ದೇಶ

ಪಾಕ್ ಗಡಿಯಲ್ಲಿ ಎಂತಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿರೀ; ಭಾರತೀಯ ಯೋಧರಿಗೆ ಬಿಪಿನ್ ಸೂಚನೆ

ಪಾಕಿಸ್ತಾನ ಮತ್ತು ಭಾರತ ನಡುವೆ ವಿಷಮ ಪರಿಸ್ಥಿತಿ ನಿರ್ಮಾಣವಾಗಿದ್ದು ಪಾಕ್ ಗಡಿಯಲ್ಲಿ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸಿದ್ಧರಾಗಿರೀ ಎಂದು ಸೇನಾ ಮುಖ್ಯಸ್ಥ ಜನರಲ್...

ಪಾಕ್ ಗಡಿಯಲ್ಲಿ ಎಂತಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿರೀ; ಭಾರತೀಯ ಯೋಧರಿಗೆ ಬಿಪಿನ್ ಸೂಚನೆ
ಬಿಪಿನ್ ರಾವತ್
Published On :
ಪಾಕಿಸ್ತಾನ ಮತ್ತು ಭಾರತ ನಡುವೆ ವಿಷಮ ಪರಿಸ್ಥಿತಿ ನಿರ್ಮಾಣವಾಗಿದ್ದು ಪಾಕ್ ಗಡಿಯಲ್ಲಿ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸಿದ್ಧರಾಗಿರೀ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಭಾರತೀಯ ಸೇನೆಗೆ ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ರಾಜಸ್ತಾನದ ಅಂತಾರಾಷ್ಟ್ರೀಯ ಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಬಿಪಿನ್ ರಾವತ್ ಅವರು ಭಾರತೀಯ ಯೋಧರಿಗೆ ಎಂತಹ ಪರಿಸ್ಥಿತಿಯನ್ನು ಎದುರಿಸಲು ಸರ್ವ ಸನ್ನದ್ಧರಾಗಿರಿ ಎಂದು ಹೇಳಿದ್ದಾರೆ.
ದೇಶದ ಭದ್ರತೆ ಕುರಿತಂತೆ ಪರಿಸ್ಥಿತಿ ವಿಷಮಕ್ಕೆ ತಿರುಗಿದ್ದು ಯಾವಾಗ ಏನು ಆಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಹೀಗಾಗಿ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸಲು ಸಮರ್ಥರಾಗಿರೀ ಎಂದು ಬಿಪಿನ್ ರಾವತ್ ಹೇಳಿದ್ದಾರೆ.
ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಾಕೋಟ್ ನಲ್ಲಿನ ಉಗ್ರ ಕ್ಯಾಂಪ್ ಮೇಲಿನ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ಗಡಿಯಲ್ಲಿ ಪಾಕಿಸ್ತಾನ ಸೇನೆ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಸಹ ಪ್ರತ್ಯುತ್ತರ ನೀಡುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.