ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ: 28ಕ್ಕೂ ಹೆಚ್ಚು ಜನರಿಗೆ ಗಾಯ, ಉಗ್ರರಿಗಾಗಿ ಪೊಲೀಸರಿಂದ ಶೋಧ
ಬಸ್ ಬಸ್ ನಿಲ್ದಾಣದ ಒಳಗಡೆಯೇ ಸ್ಫೋಟ ಸಂಭವಿಸಿದ್ದು, 28ಕ್ಕೂ ಹೆಚ್ಚು ಜನರುಗಾಯಗೊಂಡಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ.

Published On :
ಜಮ್ಮು: ಬಸ್ ಬಸ್ ನಿಲ್ದಾಣದ ಒಳಗಡೆಯೇ ಸ್ಫೋಟ ಸಂಭವಿಸಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ.
ಬಸ್ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಐಜಿಪಿ ಎಂಕೆ ಸಿನ್ಹಾ, ಸ್ಫೋಟಗೊಂಡಿರುವುದು ಗ್ರೆನೇಡ್ ಎಂಬುದನ್ನು ಖಚಿತಪಡಿಸಿದ್ದು 28ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಅವರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪೊಲೀಸರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಘಟನಾ ಸ್ಥಳವನ್ನು ಸಂಪೂರ್ಣ ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಘಟನಾ ಸ್ಥಳದಿಂದ ಓರ್ವ ಉಗ್ರ ಪರಾರಿಯಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


