ಆರ್ಥಿಕ ಸಂಕಷ್ಟದಲ್ಲಿ ದೇಶದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆ, ಸಿಬ್ಬಂದಿಗೆ ಅರ್ಧ ವೇತನ!
ದೇಶದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾದ ಸರ್ಕಾರಿ ಸ್ವಾಮ್ಯದ ಟಾಟಾ ಇಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್(ಟಿಐಎಫ್ಆರ್) ತೀವ್ರ...

Published On :
ಮುಂಬೈ: ದೇಶದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾದ ಸರ್ಕಾರಿ ಸ್ವಾಮ್ಯದ ಟಾಟಾ ಇಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್(ಟಿಐಎಫ್ಆರ್) ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸಿಬ್ಬಂದಿಗೆ ಅರ್ಧ ವೇತನ ಪಾವತಿಸುತ್ತಿದೆ.
ಈ ಸಂಬಂಧ ಸಿಬ್ಬಂದಿಗೆ ಪತ್ರ ಬರೆದಿರುವ ಟಿಐಎಫ್ಆರ್ ರಿಜಿಸ್ಟ್ರಾರ್ ವಿಂಗ್ ಕಮಾಂಡರ್(ನಿವೃತ್ತ) ಜಾರ್ಜ್ ಆಂಟೋನಿ ಅವರು, ಹಣದ ಕೊರತೆ ಹಿನ್ನೆಲೆಯಲ್ಲಿ ಫೆಬ್ರವರಿ ತಿಂಗಳಿನ ವೇತನವನ್ನು ಮೂಲ ವೇತನದ ಶೇ.50ರಷ್ಟು ಮಾತ್ರ ನೀಡಲಾಗುವುದು ಎಂದು ಹೇಳಿದ್ದಾರೆ.
'ವೇತನ ಪಾವತಿಸಲು ಸಾಕಷ್ಟು ಹಣ ನಮ್ಮ ಬಳಿ ಇಲ್ಲದಿರುವುದರಿಂದ ನಮ್ಮೆಲ್ಲಾ ಸಿಬ್ಬಂದಿಗಳಿಗೆ ಫೆಬ್ರವರಿ ತಿಂಗಳಿನ ಮೂಲವೇತನದ ಅರ್ಧದಷ್ಟನ್ನು ಮಾತ್ರ ಪಾವತಿಸಲಾಗುವುದು ಮತ್ತು ಸೂಕ್ತ ನಿಧಿ ಸಂಗ್ರಹಗೊಂಡ ಬಳಿಕ ಉಳಿದ ಮೊತ್ತವನ್ನು ಪಾವತಿ ಮಾಡಲಾಗುವುದು' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಟಿಐಎಫ್ಆರ್. ಕೇಂದ್ರ ಸರ್ಕಾರದ ಅಣು ಶಕ್ತಿ ಸಚಿವಾಲಯದಡಿ ಬರುವ ಸಂಸ್ಥೆಯಾಗಿದ್ದು, ಡಾಕ್ಟರೇಟ್ ಪದವಿಗಳನ್ನು ಪ್ರಧಾನಿಸುವ ಸ್ವಾಯತ್ತ ವಿಶ್ವವಿದ್ಯಾನಿಲಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mumbaiಮುಂಬೈಆರ್ಥಿಕ ಸಂಕಷ್ಟFund crunchTata Institute of Fundamental Researchಟಾಟಾ ಇಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


