ಎಲ್ಒಸಿಯಲ್ಲಿ ಕದನ ವಿರಾಮ, ಪೂರ್ವ ನಿಗದಿತ ಜಮ್ಮು ಭೇಟಿಯನ್ನು ರದ್ದುಗೊಳಿಸಿದ ನಿರ್ಮಲಾ ಸೀತಾರಾಮನ್
ಗಡಿ ನಿಯಂತ್ರಣ ರೇಖೆಯಾದ್ಯಂತ ಪಾಕಿಸ್ತಾನ ಕದನ ವಿರಾಮವನ್ನು ಕಾಯ್ದುಕೊಂಡಿದೆ.

Published On :
ನವದೆಹಲಿ: ಗಡಿ ನಿಯಂತ್ರಣ ರೇಖೆಯಾದ್ಯಂತ ಪಾಕಿಸ್ತಾನ ಕದನ ವಿರಾಮವನ್ನು ಕಾಯ್ದುಕೊಂಡಿದೆ.
ಇದೇ ವೇಳೆ ಜಮ್ಮು-ಕಾಶ್ಮೀರಕ್ಕೆ ಪೂರ್ವ ನಿಗದಿತ ಭೇಟಿಯನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರದ್ದುಗೊಳಿಸಿದ್ದಾರೆ.
ಕಳೆದ 20 ಗಂಟೆಗಳಲ್ಲಿ ಪಾಕಿಸ್ತಾನದಿಂದ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ. ಫೆ.14 ರಂದು ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಪಾಕಿಸ್ತಾನ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ನಡುವೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾ.07 ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಬೇಕಿತ್ತು. ಆದರೆ ನಿರ್ಮಲಾ ಸೀತಾರಾಮನ್ ಭೇಟಿ ದಿಢೀರ್ ರದ್ದಾಗಿರುವುದಕ್ಕೆ ರಕ್ಷಣಾ ಇಲಾಖೆ ಯಾವುದೇ ಕಾರಣ ನೀಡಿಲ್ಲ. ಆದರೆ ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟಿಸುವುದಾಗಿ ರಕ್ಷಣಾ ಇಲಾಖೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


