ಪುಲ್ವಾಮಾ ದಾಳಿ: ಇಮ್ರಾನ್ ಖಾನ್, ಮೋದಿ ನಡುವಿನ ಮ್ಯಾಚ್ ಫಿಕ್ಸಿಂಗ್ - ಬಿಕೆ ಹರಿಪ್ರಸಾದ್
ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿ ಮ್ಯಾಚ್ ಫಿಕ್ಸಿಂಗ್ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

Published On :
ಹೊಸದೆಹಲಿ: ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿ ಮ್ಯಾಚ್ ಫಿಕ್ಸಿಂಗ್ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಪುಲ್ವಾಮಾ ದಾಳಿ ಹಾಗೂ ಆ ನಂತರದ ಘಟನಾವಳಿಗಳನ್ನು ನೋಡಿದರೆ ಇದು ಮೋದಿ ಅವರು ಪಾಕಿಸ್ತಾನ ಜೊತೆ ಸೇರಿ ನಡೆಸಿದ ಮ್ಯಾಚ್ ಫಿಕ್ಸಿಂಗ್ ಮಾದರಿಯಲ್ಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹರಿಪ್ರಸಾದ್, ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಕೈ ಜೋಡಿಸಿ ಇಂತ ಉಗ್ರ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದರು.
ಇಮ್ರಾನ್ ಖಾನ್ ಹಾಗೂ ಪ್ರಧಾನಿ ಮೋದಿ ಅವರ ಗಮನಕ್ಕೆ ಬಾರದೆ ಪುಲ್ವಾಮಾ ದಾಳಿ ನಡೆದಿರಲು ಸಾಧ್ಯವಿಲ್ಲ, ಈ ಉಭಯ ನಾಯಕರ ನಡುವೆ ಒಂದು ವೇಳೆ ಮ್ಯಾಚ್ ಫಿಕ್ಸಿಂಗ್ ನಡೆದಿದ್ದರೆ ಅದರ ಬಗ್ಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟನೆ ನೀಡಬೇಕೆಂದು ಅವರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Modiಇಮ್ರಾನ್ ಖಾನ್ಮೋದಿಮ್ಯಾಚ್ ಫಿಕ್ಸಿಂಗ್ಬಿಕೆ ಹರಿಪ್ರಸಾದ್Pulwama Terror AttackB.K.HariprasadMatchFixingImrankhan ಪುಲ್ವಾಮಾ ಉಗ್ರರ ದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


