ಪುಲ್ವಾಮ ದಾಳಿಗಿಂತಲೂ ದೊಡ್ಡ ವಿಧ್ವಂಸಕ ಕೃತ್ಯವೆಸಗಲು 'ಜೈಶ್ ಸಂಚು'
ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

Published On :
ನವದೆಹಲಿ: ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ವಾಯುಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರ ನೆಲೆಗಳನ್ನು ಧ್ವಂಸ ಮಾಡಿದ ಬೆನ್ನಲ್ಲೇ ಭಾರತದ ಮೇಲೆ ಮತ್ತೊಂದು ಬೃಹತ್ ದಾಳಿಗೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಪುಲ್ವಾಮ ಮಾದರಿಯ ಮತ್ತೊಂದು ಆತ್ಮಾಹುತಿ ದಾಳಿ ನಡೆಸಲು ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮಹಮ್ಮದ್ ಭಯೋತ್ಪಾದಕಾ ಸಂಘಟನೆ ಸಿದ್ಧತೆ ನಡೆಸಿದ್ದು, ಈ ಬಾರಿ ಸರಣಿ ಆತ್ಮಹತ್ಯಾ ದಾಳಿಗಳನ್ನು ಯೋಜಿಸುವ ಕುರಿತು ಜೈಶ್ ಉಗ್ರ ಸಂಘಟನೆ ಸಂಚು ರೂಪಿಸುತ್ತಿದೆ ಎನ್ನಲಾಗಿದೆ. ಬಾಲಕೋಟ್‍ನ ಭಯೋತ್ಪಾದಕಾ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ವಾಯುದಾಳಿಗೆ ಪ್ರತೀಕಾರವಾಗಿ ಇನ್ನೊಂದು ಪುಲ್ವಾಮ ಮಾದರಿಯ ದಾಳಿಯನ್ನು ಮೂರು-ನಾಲ್ಕು ದಿನಗಳಲ್ಲಿ ಜೈಶ್ ಸಂಘಟನೆ ನಡೆಸಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಕಣಿವೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ
ಗುಪ್ತಚರ ಮಾಹಿತಿಗಳನ್ನು ಆಧರಿಸಿ ಇದೀಗ ಕಣಿವೆ ರಾಜ್ಯದಲ್ಲಿ ಗರಿಷ್ಠ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು. ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಸೇನಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhiಗುಪ್ತಚರ ಇಲಾಖೆIntelligence agenciesJeMPulwama Terror Attackಪುಲ್ವಾಮ ಉಗ್ರ ದಾಳಿIAF Air strikeಭಾರತೀಯ ವಾಯುಸೇನೆ ವಾಯುದಾಳಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


