ಸಂಧಾನ ಸಮಿತಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ: ಜಫರ್ಯಾಬ್ ಜಿಲಾನಿ
ಬಾಬ್ರಿ ಮಸೀದಿ ಭೂ ವಿವಾದ ಸಂಬಂಧ ನೇಮಕವಾಗಿರುವ ಸಂಧಾನ ಸಮಿತಿಗೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಎಐಎಂಪಿಎಲ್ ಬಿ ಮುಖ್ಯಸ್ಥ ಹಾಗೂ ಬಾಬ್ರಿ ಮಸೀದಿ ಆ್ಯಕ್ಷನ್ ಕಮಿಟಿ ವಕ್ತಾರ ಜಫರ್ಯಾಬ್ ಜಿಲಾನಿ ಹೇಳಿದ್ದಾರೆ.

Published On :
ನವದೆಹಲಿ: ಬಾಬ್ರಿ ಮಸೀದಿ ಭೂ ವಿವಾದ ಸಂಬಂಧ ನೇಮಕವಾಗಿರುವ ಸಂಧಾನ ಸಮಿತಿಗೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಎಐಎಂಪಿಎಲ್ ಬಿ ಮುಖ್ಯಸ್ಥ ಹಾಗೂ ಬಾಬ್ರಿ ಮಸೀದಿ ಆ್ಯಕ್ಷನ್ ಕಮಿಟಿ ವಕ್ತಾರ ಜಫರ್ಯಾಬ್ ಜಿಲಾನಿ ಹೇಳಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೇ ಸುಪ್ರೀಂ ಕೋರ್ಟ್ ಸಂಧಾನ ಪ್ರಕ್ರಿಯೆಗೆ ತಾವು ಸಹಕಾರ ನೀಡುವುದಾಗಿ ಘೋಷಣೆ ಮಾಡಿದ್ದೆವು. ಈಗ ಕೋರ್ಟ್ ಸಂಧಾನ ಸಮಿತಿ ನೇಮಕ ಮಾಡಿದೆ. ಈಗಲೂ ನಾವು ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಂಧಾನ ಸಮಿತಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಈಗ ನಮ್ಮ ವಾದಗಳನ್ನು ಸಂಧಾನ ಸಮಿತಿ ಮುಂದೆ ಮಂಡಿಸುತ್ತೇವೆ. ಆದರೆ ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡಲ್ಲ ಎಂದು ಜಫರ್ಯಾಬ್ ಜಿಲಾನಿ ಹೇಳಿದ್ದಾರೆ.
ರಾಜಕೀಯವಾಗಿ ಮತ್ತು ಧಾರ್ಮಿಕವಾಗಿ ಸೂಕ್ಷ್ಮವಾಗಿರುವ ಅಯೋಧ್ಯ ರಾಮಜನ್ಮ ಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಸಂಬಂಧ ಇಂದು ಮಹತ್ವಗ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಸಂಧಾನಕ್ಕಾಗಿ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದಲ್ಲಿ ಮೂರು ಸದಸ್ಯರ ಸಂಧಾನ ಸಮಿತಿ ನೇಮಕ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್ಶ್ರೀ ಶ್ರೀ ರವಿಶಂಕರ್ ಗುರೂಜಿAyodhya land Dispute caseಅಯೋಧ್ಯೆ ಭೂ ವಿವಾದ ಪ್ರಕರಣSri Sri Ravishankar guruji
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


