ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ- ರಾಹುಲ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಒಡಿಶಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಕೊರಾಪಟ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಮಹಿಳೆಯರ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್ ಗಾಂಧಿ, ಮಹಿಳೆಯರ ಬಲವರ್ಧನೆ ಹಿನ್ನೆಲೆಯಲ್ಲಿ ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ತುರ್ತಾಗಿ ಮಹಿಳೆಯರಿಗೆ ಮೀಸಲಾತಿ ಒದಗಿಸಬೇಕಾದ ಅಗತ್ಯವಿದೆ. ಇದನ್ನು ಖಾತ್ರಿಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಕೆಲಸ ಮಾಡಲಿದೆ ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ವಿರುದ್ಧದ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ನೀತಿ ರೂಪಿಸಲಾಗುವುದು,ಅವರಿಗೆ ಕ್ಷಿಪ್ರಗತಿಯಲ್ಲಿ ನ್ಯಾಯ ದೊರೆಕಿಸಲಾಗುವುದು, ಒಡಿಶಾದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಮಹಿಳೆಯರಿಗೂ ಇಂಜಿನಿಯರಿಂಗ್, ವೈದ್ಯಕೀಯ ಮತ್ತಿತರ ಯಾವುದೇ ಕ್ಷೇತ್ರದಲ್ಲಾದರೂ ಉಚಿತ ಶಿಕ್ಷಣ ಪೂರೈಸಲಾಗುವುದು ಎಂದು ಹೇಳಿದರು.
ಬುಡಕಟ್ಟ ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿರುವ ಮಹಿಳೆಯರ ಸಬಲೀಕಣಕ್ಕಾಗಿ ಉಚಿತ ಶಿಕ್ಷಣ ಪೂರೈಸಲಾಗುವುದು ಎಂದು ರಾಹುಲ್ ಗಾಂಧಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


