ದೇಶ

ಲೋಕಸಭಾ ಚುನಾವಣೆ: ಪರಿಸರ ಹೋರಾಟಗಾರರ ಬೆಂಬಲ ಯಾಚಿಸಿದ ರಾಹುಲ್

ಗೋವಾದ ರಾಜಧಾನಿ ಪಣಜಿಯಲ್ಲಿ ಪರಿಸರ ಹೋರಾಟಗಾರರೊಂದಿಗೆ ಸರಣಿ ಸಭೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ: ಪರಿಸರ ಹೋರಾಟಗಾರರ ಬೆಂಬಲ ಯಾಚಿಸಿದ ರಾಹುಲ್
ರಾಹುಲ್ ಗಾಂಧಿ
Published On :

ಪಣಜಿ: ಗೋವಾದ ರಾಜಧಾನಿ ಪಣಜಿಯಲ್ಲಿ  ಪರಿಸರ ಹೋರಾಟಗಾರರೊಂದಿಗೆ ಸರಣಿ ಸಭೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಮೀನುಗಾರಿಕೆ ಸಮುದಾಯದ ಪ್ರತಿನಿಧಿಗಳು ಹಾಗೂ ಗಣಿ ಉದ್ಯಮದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ರಾಹುಲ್ ಗಾಂಧಿ, ದೇಶ ಹಾಗೂ ರಾಜ್ಯಕ್ಕೆ ಒಗ್ಗೂಡಿ ಕಾರ್ಯನಿರ್ವಹಿಸುವಂತೆ  ಸಲಹೆ ನೀಡಿದರು.

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಶ್ಯಾಮ್ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಬೂಟ್ ಮಟ್ಟದ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರಫೆಲ್ ಕಡತ ನಾಪತ್ತೆ ಹಿಂದೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪಾತ್ರ ಕುರಿತಂತೆ ತನಿಖೆ ನಡೆಸುವಂತೆ ಒತ್ತಾಯಿಸಿದರು.

ರಫೆಲ್ ಒಪ್ಪಂದಕ್ಕೆ ಸಂಬಂಧಿಸಿದ ಕಡತಗಳು ತಮ್ಮ ಬಳಿ ಇರುವುದಾಗಿ ಮನೋಹರ್ ಪರಿಕ್ಕರ್ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.