ಒಂದೇ ವರ್ಷದಲ್ಲಿ ಏಳು ಬಾರಿ ಭಾರತದೊಳಗೆ ನುಸುಳಿದ ಜೆಇಎಂ ಉಗ್ರರು
2017-18 ಅವಧಿಯಲ್ಲಿ ಜೈಷ್ ಇ- ಮೊಹಮ್ಮದ್ ಸಂಘಟನೆಯಿಂದ ಏಳು ಬಾರಿ ಅಕ್ರಮವಾಗಿ ಉಗ್ರರನ್ನು ಭಾರತದೊಳಗೆ ನುಸುಳಿಸಲಾಗಿತ್ತು ಎಂದು ರಾಷ್ಟ್ರೀಯ ತನಿಖಾ ದಳ ಚಾರ್ಚ್ ಶೀಟ್ ನಲ್ಲಿ ತಿಳಿಸಿದೆ.

ನವದೆಹಲಿ: 2017-18 ಅವಧಿಯಲ್ಲಿ ಜೈಷ್ ಇ- ಮೊಹಮ್ಮದ್ ಸಂಘಟನೆಯಿಂದ ಏಳು ಬಾರಿ ಅಕ್ರಮವಾಗಿ ಉಗ್ರರನ್ನು ಭಾರತದೊಳಗೆ ನುಸುಳಿಸಲಾಗಿತ್ತು ಎಂದು ರಾಷ್ಟ್ರೀಯ ತನಿಖಾ ದಳ ಚಾರ್ಚ್ ಶೀಟ್ ನಲ್ಲಿ ತಿಳಿಸಿದೆ.
ಪಾಕಿಸ್ತಾನದ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಅಕ್ಟೋಬರ್ 23, 2017 ರಿಂದ ಸೆಪ್ಟೆಂಬರ್ 2018ರವರೆಗೂ ಭಾರತದೊಳಗೆ ಏಳು ಬಾರಿ ತರಬೇತಿ ಪಡೆದ ಹಾಗೂ ಶಸ್ತ್ರ ಸಜ್ಜಿತ ಉಗ್ರರನ್ನು ನುಸುಳಿಸಲಾಗಿತ್ತು ಎಂದು ವಿಚಾರಣೆ ವೇಳೆಯಲ್ಲಿ ತಿಳಿದುಬಂದಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಚಾರ್ಚ್ ಶೀಟ್ ನಲ್ಲಿ ಹೇಳಲಾಗಿದೆ.
ಕತ್ವಾ ಸಾಂಬಾ ವಲಯದಲ್ಲಿ ಅಂತಾರಾಷ್ಟ್ರೀಯ ಗಡಿಯಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿಸಲಾಗುತಿತ್ತು.ಜಿಇಎಂ ಸಂಘಟನೆ ಭಾರತದ ವಿರುದ್ಧ ಯುದ್ಧಕ್ಕೆ ಪಿತೂರಿ ನಡೆಸಿತ್ತು ಎಂಬುದು ತನಿಖೆ ವೇಳೆ ತಿಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


