ದೇಶ

ರಂಜಾನ್ ಗಾಗಿ 1 ತಿಂಗಳು ಚುನಾವಣೆ ಮುಂದೂಡಲು ಸಾಧ್ಯವಿಲ್ಲ, ಹಬ್ಬದಂದು ಮತದಾನ ಇಲ್ಲ: ಇಸಿ ಸ್ಪಷ್ಟನೆ

ರಂಜಾನ್ ಅವಧಿಯಲ್ಲಿ ಲೋಕಸಭೆ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಸೋಮವಾರ ಸ್ಪಷ್ಟನೆ ನೀಡಿದ್ದು....

ರಂಜಾನ್ ಗಾಗಿ 1 ತಿಂಗಳು ಚುನಾವಣೆ ಮುಂದೂಡಲು ಸಾಧ್ಯವಿಲ್ಲ, ಹಬ್ಬದಂದು ಮತದಾನ ಇಲ್ಲ: ಇಸಿ ಸ್ಪಷ್ಟನೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ರಂಜಾನ್ ಅವಧಿಯಲ್ಲಿ ಲೋಕಸಭೆ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಸೋಮವಾರ ಸ್ಪಷ್ಟನೆ ನೀಡಿದ್ದು, ರಂಜಾನ್ ಉಪವಾಸ ಒಂದು ತಿಂಗಳು ನಡೆಯುತ್ತದೆ. ಇದಕ್ಕಾಗಿ ಒಂದು ತಿಂಗಳು ಚುನಾವಣೆ ಮುಂದೂಡಲು ಸಾಧ್ಯವಿಲ್ಲ. ಆದರೆ ಪ್ರಮುಖ ಹಬ್ಬದ ದಿನದಂದು ಹಾಗೂ ಶುಕ್ರವಾರಗಳಂದು ಮತದಾನವನ್ನು ತಪ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಂಜಾನ್ ಅವಧಿಯಲ್ಲಿ ಲೋಕಸಭೆ ಚುನಾವಣೆ ಘೋಷಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಕೋಲ್ಕತಾದ ಮೇಯರ್ ಫಿರಹದ್ ಹಕೀಮ್ ಅವರು ಬಿಜೆಪಿ ಅಲ್ಪಸಂಖ್ಯಾತ ಮತದಾನವನ್ನು ಬಯಸುವುದಿಲ್ಲ. ಆದ್ದರಿಂದ, ರಂಜಾನ್ ಸಮಯದಲ್ಲಿ ಮತದಾನದ ಘೋಷಣೆ ಮಾಡಿದೆ. ಆದರೆ ನಾವು ಚಿಂತಿಸುವುದಿಲ್ಲ, ನಾವು ಮತ ಚಲಾಯಿಸುತ್ತೇವೆ ಎಂದು ಹೇಳಿದ್ದರು.
ಈ ಮಧ್ಯೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಚುನಾವಣಾ ಆಯೋಗದ ಬೆಂಬಲಕ್ಕೆ ನಿಂತಿದ್ದು, ರಂಜಾನ್ ಮುಸ್ಲಿಮರ ಮತದಾನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮುಸ್ಲಿಂ ಸಮುದಾಯ ಮತ್ತು ರಂಜಾನ್ ಅನ್ನು ರಾಜಕೀಯಕ್ಕೆ ಬಳಸಬೇಡಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.