2014ರಲ್ಲಿ ನೀಡಿದ್ದ ಭರವಸೆಯ ಪ್ರಶ್ನೆಗಳಿಗೆ ಉತ್ತರಿಸಲು ರೆಡಿಯಾಗಿ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ
2014ರ ಲೋಕಸಭೆ ಚುನಾವಣೆ ವೇಳೆಸ ಬಿಜೆಪಿ ಜನರಿಗೆ ನೀಡಿದ್ದ ಭರವಸೆಗಳ ಈಡೇರಿಕೆ ಸಂಬಂಧ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ರೆಡಿಯಾಗಿರಿ ಎಂದು ..

Published On :
ಮುಂಬಯಿ: 2014ರ ಲೋಕಸಭೆ ಚುನಾವಣೆ ವೇಳೆಸ ಬಿಜೆಪಿ ಜನರಿಗೆ ನೀಡಿದ್ದ ಭರವಸೆಗಳ ಈಡೇರಿಕೆ ಸಂಬಂಧ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ರೆಡಿಯಾಗಿರಿ ಎಂದು ಶಿವಸೇನೆ ಎಚ್ಚರಿಕೆ ನೀಡಿದೆ.
2014ರ ಚುನಾವಣೆ ವೇಳೆ ಕಾಶ್ಮೀರ ಕಣಿವೆಯಲ್ಲಿ ಶಾಂತಿ ಸ್ಥಾಪನೆ, ಹಾಗೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದರು, ಆದರೆ ಭರವಸೆಗಳು ಎಷ್ಟು ಈಡೇರಿವೆ ಎಂದು ಪ್ರಶ್ನಿಸಿದ್ದಾರೆ.
ಏಪ್ರಿಲ್ 11ರಿಂದ ಮೇ 19ರ ವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜನಗಳು ಬಹಳ ಕಾಲದವರೆಗೆ ಮೂರ್ಖರಾಗುವುದಿಲ್ಲ ಎಂಬುದನ್ನು ಇತಿಹಾಸಹ ಹೇಳುತ್ತದೆ, ಜನರಿಗೂ ಕೆಲವು ಪ್ರಶ್ನೆಗಳಿಗೆ, ಆ ಪ್ರಶ್ನೆಗಳು ಬ್ಯಾಲಟ್ ಬಾಕ್ಸ್ ನಲ್ಲಿ ಉತ್ತರಗಳಾಗಿ ತುಂಬಲಿವೆ ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಬರೆಯಲಾಗಿದೆ.
ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸುವ ಹಾಗೂ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭರವಸೆ ಮೇಲೆ 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು,ಆದರೆ 2019 ಆದರೂ ನೀಡಿದ್ದ ಭರವಸೆ ಈಡೇರಿಲ್ಲ, ಹೀಗಾಗಿ ಜನ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದರಾಗುವಂತೆ ಶಿವಸೇನೆ ಎಚ್ಚರಿಕೆ ನೀಡಿದೆ,
ಬೇರೆ ಎಲ್ಲಾ ದೇಶಗಳು ಇವಿಎಂ ಯಂತ್ರಗಳನ್ನು ನಿಷೇಧಿಸಿರುವಾಗ, ನಮ್ಮಲ್ಲಿ ಅವುಗಳನ್ನು ಏಕೆ ಬಳಸಬೇಕು ಎಂದು ಪ್ರಶ್ನಿಸಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉದ್ಘಾಟನೆ ಕಾರ್ಯಕ್ರಮ ಮತ್ತು ಜನಪ್ರಿಯ ಯೋಜನೆಗಳನ್ನು ಘೋಷಿಸುವಲ್ಲಿ ಬ್ಯುಸಿಯಾಗಿದ್ದಾರೆ ಎಂದು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


