'ಮಸೂದ್ ಅಝರ್ ಜೀ'ಎಂದಿದ್ದ ರಾಹುಲ್ ವಿರುದ್ಧ ಕೇಸ್ ದಾಖಲು
ಜೈಷ್ - ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಜೀ ಎಂದಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಹಾರ ನ್ಯಾಯಾಲಯವೊಂದರಲ್ಲಿ ಕೇಸ್ ದಾಖಲಾಗಿದೆ.

ನವದೆಹಲಿ: ಜೈಷ್ - ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಜೀ ಎಂದಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಹಾರ ನ್ಯಾಯಾಲಯವೊಂದರಲ್ಲಿ ಕೇಸ್ ದಾಖಲಾಗಿದೆ.
ದೇಶದ್ರೋಹ ಸೇರಿದಂತೆ ಮತ್ತಿತರ ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಸಾಮಾಜಿಕ ಕಾರ್ಯಕರ್ತ ತಮನ್ನಾ ಹಸ್ಮಿ ಎಂಬುವರು ಮುಝಾಪರ್ ಪುರುವಿನ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದಾರೆ.
ಸೋಮವಾರ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಸ್ತುತ ರಾಷ್ಟ್ರೀಯ ರಕ್ಷಣಾ ಸಲಹೆಗಾರರಾಗಿರುವ ಅಜಿತ್ ಧೋವಲ್ ಅವರು ಮಸೂದ್ ಅಝರ್ ಜೀ ಅವರನ್ನು ವಿಮಾನದಲ್ಲಿ ಕರೆದುಕೊಂಡು ಹೋಗಿ ಕಂದಹಾರ್ ನಲ್ಲಿ ಬಿಟ್ಟು ಬಂದಿದ್ದರು ಎಂದು ಹೇಳಿಕೆ ನೀಡಿದ್ದರು.
ಮಸೂದ್ ಅಝರ್ ಜೀ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ, ಇಡೀ ದೇಶದ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಹಸ್ಮಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಮಾರ್ಚ್ 16ಕ್ಕೆ ನಿಗದಿಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


