ದೇಶ

ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, 10 ಹಾಲಿ ಸಂಸದರಿಗೆ ಕೊಕ್, ಶೇ.41 ರಷ್ಟು ಮಹಿಳೆಯರಿಗೆ ಟಿಕೆಟ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ 42 ಲೋಕಸಭಾ ಕ್ಷೇತ್ರಗಳ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಭ್ಯರ್ಥಿಗಳನ್ನು....

ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, 10 ಹಾಲಿ ಸಂಸದರಿಗೆ ಕೊಕ್, ಶೇ.41 ರಷ್ಟು ಮಹಿಳೆಯರಿಗೆ ಟಿಕೆಟ್
ಮಮತಾ ಬ್ಯಾನರ್ಜಿ
Published On :
ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ 42 ಲೋಕಸಭಾ ಕ್ಷೇತ್ರಗಳ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಭ್ಯರ್ಥಿಗಳನ್ನು ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಮಮತಾ ಬ್ಯಾನರ್ಜಿ, 42 ಕ್ಷೇತ್ರಗಳ ಪೈಕಿ 17(ಶೇ.41 ರಷ್ಟು) ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ ಮತ್ತು ಹಾಲಿ 10 ಸಂಸದರಿಗೆ ಟಿಕೆಟ್ ನೀಡಿಲ್ಲ ಎಂದರು.
ಈ ಬಾರಿ ಟಿಎಂಸಿ ಟಿಕೆಟ್ ಪಡೆದವರಲ್ಲಿ ಟಿವಿ, ಸಿನಿಮಾ ಹಾಗೂ ಕ್ರೀಡಾಪಟುಗಳು ಸೇರಿ ಖ್ಯಾತನಾಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ತಮ್ಮ ಪಕ್ಷವೂ ಒಡಿಶಾ, ಅಸ್ಸಾಂ, ಜಾರ್ಖಂಡ್, ಬಿಹಾರ ಮತ್ತು ಅಂಡಮಾನ್ ಗಳಲ್ಲೂ ಸ್ಪರ್ಧಿಸಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಹಾಗೂ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ, ವಿವಿಐಪಿಗಳು ಹೆಲಿಕಾಪ್ಟರ್ ಮೂಲಕ ಹಣ ಸಾಗಿಸಿ, ಮತದಾರರಿಗೆ ಹಂಚುತ್ತಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.