ಲೋಕಸಭೆ ಚುನಾವಣೆ: ಅಮೃತಸರದಿಂದ ಮನ್ ಮೋಹನ್ ಸಿಂಗ್ ಸ್ಪರ್ಧಿಸಲ್ಲ- ಅಮರೀಂದರ್ ಸಿಂಗ್
ಮಾಜಿ ಪ್ರಧಾನ ಮಂತ್ರಿ ಮನ್ ಮೋಹನ್ ಸಿಂಗ್ ಅವರನ್ನು ಅಮೃತಸರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂಬ ವರದಿಗಳನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ತಳ್ಳಿ ಹಾಕಿದ್ದಾರೆ.

ಚಂಡೀಘಡ: ಮಾಜಿ ಪ್ರಧಾನ ಮಂತ್ರಿ ಮನ್ ಮೋಹನ್ ಸಿಂಗ್ ಅವರನ್ನು ಅಮೃತಸರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂಬ ವರದಿಗಳನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ತಳ್ಳಿ ಹಾಕಿದ್ದಾರೆ.
ಎಎಪಿ ಅಥವಾ ಇನ್ನಿತರ ಪಕ್ಷಗಳೊಂದಿಗೆ ಪಂಜಾಬಿನಲ್ಲಿ ಯಾವುದೇ ಮೈತ್ರಿ ಬಗೆಗಿನ ಮಾತುಕತೆ ಬಗ್ಗೆಯೂ ನಿರಾಕರಿಸಿದ್ದಾರೆ. ಪಂಜಾಬಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಮೈತ್ರಿ ಅಗತ್ಯವಿಲ್ಲ, ಅಥವಾ ಯಾವುದೇ ಪಕ್ಷದೊಂದಿಗೂ ಮಾತುಕತೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ.
ಮನ್ ಮೋಹನ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ್ದು,ಪಂಜಾಬಿನಲ್ಲಿ ಕಾಂಗ್ರೆಸ್ ಯೋಜನೆ ಕುರಿತಂತೆ ಅವರು ತಿಳಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಇಷ್ಟವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಅಮರೀಂದರ್ ಸಿಂಗ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


