ಇಥಿಯೋಪಿಯಾದಲ್ಲಿ ವಿಮಾನ ಪತನ; ಭಾರತದಲ್ಲೂ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಹಾರಾಟಕ್ಕೆ ನಿಷೇಧ
ಇಥಿಯೋಪಿಯಾದಲ್ಲಿ 157 ಪ್ರಯಾಣಿಕರ ಧಾರುಣ ಸಾವಿಗೆ ಕಾರಣವಾಗಿದ್ದ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನ ಪ್ರಕರಣದ ಬೆನ್ನಲ್ಲೇ...

Published On :
ನವದೆಹಲಿ: ಇಥಿಯೋಪಿಯಾದಲ್ಲಿ 157 ಪ್ರಯಾಣಿಕರ ಧಾರುಣ ಸಾವಿಗೆ ಕಾರಣವಾಗಿದ್ದ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನ ಪ್ರಕರಣದ ಬೆನ್ನಲ್ಲೇ ಭಾರತ ಸರ್ಕಾರ ಕೂಡ ಈ ಮಾದರಿಯ ವಿಮಾನಗಳ ಹಾರಾಟಕ್ಕೆ ಬ್ರೇಕ್ ಹಾಕಿದೆ.
ಬೋಯಿಂಗ್ 737 ವಿಮಾನಗಳು ಪದೇ ಪದೇ ಅಪಘಾತಕ್ಕೀಡಾಗುತ್ತಿದ್ದು, ಇದೇ ಕಾರಣಕ್ಕೆ ಈ ಹಿಂದೆ ಬ್ರಿಟನ್, ಜರ್ಮನಿ, ಫ್ರಾನ್ಸ್, ಸಿಂಗಾಪುರ, ಆಸ್ಟ್ರೇಲಿಯಾ, ಮಲೇಷ್ಯಾ, ಚೀನಾ ಮತ್ತು ಒಮನ್ ರಾಷ್ಟ್ರಗಳು ಈ ಮಾದರಿಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರಿವೆ. ಅಂತೆಯೇ ಇಥಿಯೋಪಿಯಾ ದುರಂತದ ಬೆನ್ನಲ್ಲೇ ಬೋಯಿಂಗ್ ಸಂಸ್ಥೆ ಈ ವಿಮಾನದ ತಾಂತ್ರಿಕ ಪರಿಶೀಲನೆ ನಡೆಸುವುದಾಗಿ ಹೇಳಿಕೆ ನೀಡಿದೆ.
ಬೋಯಿಂಗ್ ಸಂಸ್ಥೆ ಕೂಡ ಈ ವಿಮಾನ ಮಾದರಿಗೆ ತುರ್ತು ಸುಧಾರಣೆ ಮಾಡಲು ಆದೇಶ ನೀಡಿದೆ. ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಇದರ ಬೆನ್ನಲ್ಲೇ ಭಾರತದ ಕೇಂದ್ರ ನಾಗರಿಕ ವಿಮಾನಯಾನ ಸಂಸ್ಥೆ ಡಿಜಿಸಿಎ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಹಾರಾಟ ನಿಷೇಧಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ ಭಾರತದಲ್ಲಿನ ಎಲ್ಲ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳು ಹಾರಾಟ ಸ್ಥಗಿತಗೊಳಿಸಿವೆ. ಈ ಪೈಕಿ ಸ್ಪೈಸ್ ಜೆಟ್ ಸಂಸ್ಥೆ ತನ್ನ 7 ಬೋಯಿಂಗ್ 737 ಮ್ಯಾಕ್ಸ್ ವಿಮಾನದ ಹಾರಾಟವನ್ಮು ಸ್ಥಗಿತಗೊಳಿಸಿರುವುದಾಗಿ ಘೋಷಣೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiDGCAಡಿಜಿಸಿಎEthiopian airlines CrashBoeing 737 MAXಇಥಿಯೋಪಿಯನ್ ಏರ್ಲೈನ್ಸ್ ವಿಮಾನ ಪತನಬೋಯಿಂಗ್ 737 ಮ್ಯಾಕ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


