ಕಣಿವೆ ರಾಜ್ಯದಲ್ಲಿ ಮತ್ತೊಂದು ಉಗ್ರರ ಅಡಗುದಾಣ ಪತ್ತೆ, ಓರ್ವ ಶಂಕಿತ ಉಗ್ರನ ಬಂಧನ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಬೃಹತ್ ಅಡಗುದಾಣವೊಂದನ್ನು ಸೈನಿಕರು ಪತ್ತೆ ಮಾಡಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಬೃಹತ್ ಅಡಗುದಾಣವೊಂದನ್ನು ಸೈನಿಕರು ಪತ್ತೆ ಮಾಡಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ.
ಕಾಶ್ಮೀರದ ಕುಲ್ಗಾಮ್ ನ ಯರ್ಲಪೋರಾ ಪ್ರದೇಶದಲ್ಲಿ ಉಗ್ರರ ಅಡಗುದಾಣವಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬುಧವಾರ ದಾಳಿ ನಡೆಸಿದ ಸೇನೆ ಅಲ್ಲಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ. ಅಲ್ಲದೆ ಅಲ್ಲಿದ್ದ ಓರ್ವ ಶಂಕಿತ ಉಗ್ರಗಾಮಿಯನ್ನು ವಶಕ್ಕೆ ಪಡೆದಿದೆ. ಬಂಧಿತ ಶಂಕಿತ ಉಗ್ರನನ್ನು ಸ್ಥಳೀಯ ನಿವಾಸಿ ಹಾಗೂ ಅಡಗುದಾಣದ ಮಾಲೀಕ ಅಯೂಬ್ ರಾಥರ್ ಎಂದು ಗುರುತಿಸಲಾಗಿದೆ.
ಸೇನಾ ಮೂಲಗಳು ತಿಳಿಸಿರುವಂತೆ ಅಡಗುದಾಣದಲ್ಲಿದ್ದ ಗ್ರೆನೇಡ್ ಗಳು, ಎಕೆ 47 ಗನ್ ಗಳು, ಬಾಂಬ್ ಗಳು ಮತ್ತು ಇತರೆ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆterrorist hideoutಭಯೋತ್ಪಾದಕ ಅಡಗುತಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


