ಜಮ್ಮು ಕಾಶ್ಮೀರ: ಎನ್‌ಸಿಪಿ .ಕಾರ್ಯಕರನ ಮೇಲೆ ಉಗ್ರರಿಂದ ಗುಂಡಿನ ದಾಳಿ
ಜಮ್ಮು ಕಾಶ್ಮೀರದ ರಾಜಕೀಯ ಮುಖಂಡ, ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕರ್ತ ಮೊಹದ್ ಇಸ್ಮಾಯಿಲ್ ವಾನಿ (60) ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

Published On :
ಶ್ರೀನಗರ: ಜಮ್ಮು ಕಾಶ್ಮೀರದ ರಾಜಕೀಯ ಮುಖಂಡ, ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕರ್ತ ಮೊಹದ್ ಇಸ್ಮಾಯಿಲ್ ವಾನಿ (60) ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯ ಪರಿಣಾಮ ವಾನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಶ್ಮೀರ ದಕ್ಷಿಣ ಭಾಗದ ಅನಂತ್ ನಾಗ್ ಜಿಲ್ಲೆ ತಾಜೀಪುರ ಬಿಜ್ಜಿಹರ ಎಂಬಲ್ಲಿ ಘಟನೆ ನಡೆದಿದ್ದು ಗಾಯಾಳು ವಾನಿಯವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಮೂಲಗಳು ಹೇಳಿದೆ./
ಪುಲ್ವಾಮಾ ದಾಳಿ ಹಾಗೂ ಆ ನಂತ್ರಾ ಭಾರತ ನಡೆಸಿದ್ದ ಏರ್ ಸ್ಟ್ರೈಕ್ ಬಳಿಕ ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಭಾರತ ಸತತ ಪ್ರಯತ್ನದಲ್ಲಿದೆ. ಈ ನಡುವೆಯೂ ಗಡಿ ಭಾಗದಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಈಗ ಉಗ್ರರು ಎನ್.ಸಿ.ಪಿ. ಕಾರ್ಯಕರ್ತನ ಮೇಲೆ ಗುಂಡು ಹಾರಿಸಿ ಕ್ರೌರ್ಯ ಮೆರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


