ಭಯೋತ್ಪಾದಕರ ಹುಟ್ಟಡಗಿಸಲು ಮನಮೋಹನ್ ಸಿಂಗ್ ಗಿಂತ ಮೋದಿಯೇ ಉತ್ತಮ: ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗಿಂತ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಉತ್ತಮ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ದೆಹಲಿ ಸಿಎಂ ಶೀಲಾ ದೀಕ್ಷಿತ್ ಹೇಳಿದ್ದಾರೆ.

Published On :
ನವದೆಹಲಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗಿಂತ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಉತ್ತಮ ಎಂದು ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ದೆಹಲಿ ಸಿಎಂ ಶೀಲಾ ದೀಕ್ಷಿತ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಶೀಲಾ ದೀಕ್ಷಿತ್, ಭಯೋತ್ಪಾದನೆ ವಿಚಾರವಾಗಿ ಪ್ರಧಾನಿ ಮೋದಿ ಕೈಗೊಂಡ ದಿಟ್ಟ ಕ್ರಮಗಳನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೈಗೊಂಡಿರಲಿಲ್ಲ. 26 / 11 ಮುಂಬಯಿ ದಾಳಿಯ ಬಳಿಕ ಭಯೋತ್ಪಾದನೆ ಬಗ್ಗೆ ವ್ಯವಹರಿಸುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಈಗಿನ ಪ್ರಧಾನಿ ಮೋದಿಯಷ್ಟು ಬಲವಾದ ಹಾಗೂ ನಿರ್ಧಾರಯುತವಾದ ಹೋರಾಟ ಮಾಡಲಿಲ್ಲ, ದಿಟ್ಟ ಕ್ರಮ ಕೈಗೊಂಡಿರಲಿಲ್ಲ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಮೋದಿ ಭಯೋತ್ಪಾದನೆ ವಿರುದ್ಧ ಕೈಗೊಂಡ ಕ್ರಮಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದೂ ಶೀಲಾ ದೀಕ್ಷಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ಅವರ ಕ್ರಮಗಳನ್ನು ರಾಜಕೀಯ ಸ್ಟಂಟ್ ಎಂದು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiPM Modiಪ್ರಧಾನಿ ಮೋದಿManmohan Singhಮನಮೋಹನ್ ಸಿಂಗ್Sheila Dikshitಶೀಲಾ ದೀಕ್ಷಿತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


