ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸೆಹ್ವಾಗ್ 'NO' ಅಂದಿದ್ದೇಕೆ!
ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು ಈ ಮಧ್ಯೆ ಕೆಲ ಖ್ಯಾತನಾಮರಿಗೆ ತಮ್ಮ ಪಕ್ಷದಿಂದ ಟಿಕೆಟ್ ನೀಡಿ ಗೆಲ್ಲಿಸಿಕೊಳ್ಳುವ ತವಕದಲ್ಲಿದ್ದರೆ ಇತ್ತ ಟೀಂ ಇಂಡಿಯಾದ...

Published On :
ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗಿದ್ದು ಈ ಮಧ್ಯೆ ಕೆಲ ಖ್ಯಾತನಾಮರಿಗೆ ತಮ್ಮ ಪಕ್ಷದಿಂದ ಟಿಕೆಟ್ ನೀಡಿ ಗೆಲ್ಲಿಸಿಕೊಳ್ಳುವ ತವಕದಲ್ಲಿದ್ದರೆ ಇತ್ತ ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಬಿಜೆಪಿ ಟಿಕೆಟ್ ಅನ್ನು ನಿರಾಕರಿಸಿದ್ದಾರೆ.
ವೈಯಕ್ತಿಕ ಕಾರಣಗಳಿಂದಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನಗೆ ರಾಜಕೀಯ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿಯಿಲ್ಲವೆಂದು ಸೆಹ್ವಾಗ್ ತಿಳಿಸಿರುವುದಾಗಿ ದೆಹಲಿ ಬಿಜೆಪಿ ನಾಯಕರು ತಿಳಿಸಿದ್ದಾರೆ. ಇದೇ ವೇಳೆ ಗೌತಮ್ ಗಂಭೀರ್ ಅವರು ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ವೀರೇಂದ್ರ ಸೆಹ್ವಾಗ್ ಅವರನ್ನು ಬಿಜೆಪಿ ಸಂಸದ ಪರ್ವೇಶ್ ವರ್ಮ ಅವರ ಕ್ಷೇತ್ರವಾದ ಪಶ್ಚಿಮ ದೆಹಲಿಯಿಂದ ಕಣಕ್ಕಿಳಿಸಲು ಬಿಜೆಪಿ ಮುಂದಾಗಿತ್ತು. ಆದರೆ ಸೆಹ್ವಾಗ್ ಟಿಕೆಟ್ ನಿರಾಕರಿಸಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


