ದೇಶ

ಒಡಿಶಾ: ಬಿಜೆಡಿ ಸಂಸದ ಬಲಭದ್ರ ಮಾಂಜಿ ಬಿಜೆಪಿಗೆ ಸೇರ್ಪಡೆ

ನಬರಂಗ್ಪುರ್ ಕ್ಷೇತ್ರದ ಹಾಲಿ ಸಂಸದ, ಬಿಜು ಜನತಾದಳ (ಬಿಜೆಡಿ) ನಾಯಕ ಬಲಭದ್ರ ಮಾಂಜಿ ಬಿಜೆಡಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಒಡಿಶಾ: ಬಿಜೆಡಿ ಸಂಸದ ಬಲಭದ್ರ ಮಾಂಜಿ ಬಿಜೆಪಿಗೆ ಸೇರ್ಪಡೆ
ಬಲಭದ್ರ ಮಾಂಜಿ
Published On :
ಭುವನೇಶ್ವರ್: ನಬರಂಗ್ಪುರ್ ಕ್ಷೇತ್ರದ ಹಾಲಿ ಸಂಸದ, ಬಿಜು ಜನತಾದಳ (ಬಿಜೆಡಿ) ನಾಯಕ ಬಲಭದ್ರ ಮಾಂಜಿ ಬಿಜೆಡಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಶನಿವಾರ ನವದೆಹ;ಲಿಯ ಕಮಲ ಪಕ್ಷದ ಪ್ರಧಾನ ಕಛೇರಿಯಲ್ಲಿ ಮಾಂಜಿ ಬಿಜೆಪಿಗೆ ಅಧಿಕೃತ ಸೇರ್ಪಡೆಯಾಗಿದ್ದಾರೆ.
"ನಾನು ನನ್ನ ಜಿಲ್ಲೆಯ ಅಭಿವೃದ್ದಿಗಾಗಿ ಏನನ್ನಾದರೂ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಜಿಲ್ಲೆಯ ಮತ್ತು ರಾಜ್ಯ ಮಟ್ಟದಲ್ಲಿ ಸಾಂಸ್ಥಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯುವಾಗ ನನ್ನನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ನಾನು ಬಿಜೆಡಿ ಪಕ್ಷವನ್ನು ಬಿಟ್ಟು ಬಿಜೆಪಿ ಸೇರಿದ್ದೇನೆ" ಮಾಂಜಿ ಹೇಳಿದ್ದಾರೆ.
ಮಾಂಜಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕಳೆದ ಐದು ವರ್ಷಗಳಲ್ಲಿ ಮಾಂಜಿ ಜಿಲ್ಲೆಯ ಅಭಿವೃದ್ದಿಗಾಗಿ ಮಾಡಿರುವ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ದೇಶದ ಅತ್ಯುತ್ತಮ ಬುಡಕಟ್ಟು ನಾಯಕರಾಗಿರುವ ಮಾಂಜಿ ಜಿಲ್ಲೆಯಲ್ಲಿ ಹಲವಾರು ಮೂಲಭೂತ ಸೌಕರ್ಯ ಯೋಜನೆಗಳನ್ನು ಜಾರಿಗೆ ತರುವಲ್ಲಿ ತೋರಿದ ಶ್ರಮ ಅನನ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಮಾಂಜಿ ಸೇರ್ಪಡೆಯಿಂದ ಪಕ್ಷದ ಬಲವರ್ಧನೆಯಾಗಲಿದೆ ಎಂದ ಸಚಿವರು ಮಾಂಜಿ ಕಾರಣದಿಂದ ಅವರ ಜಿಲ್ಲೆ ರೈಲ್ವೆ ನಕಾಶೆಯಲ್ಲಿ ಕಾಣಿಸಿಕೊಂಡಿರುವುದಾಗಿಯೂ ಹೇಳಿದ್ದಾರೆ.
ರೈಲ್ವೆ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದ ಮಾಂಜಿ ಅವರಿಗೆ ನಬರಂಗ್ಪುರ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಬಿಜೆಡಿ 2014ರಲ್ಲಿ ಟಿಕೆಟ್ ನೀಡಿತ್ತು. ಬಿಜೆಪಿ ರಾಷ್ಟ್ರೀಯ  ಕಾರ್ಯದರ್ಶಿ ಮತ್ತು ಒಡಿಶಾ ಉಸ್ತುವಾರಿ ಅರುಣ್ ಸಿಂಗ್ ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.