ಮನೋಹರ್ ಪರಿಕ್ಕರ್ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರ ಸಂತಾಪ
ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Published On :
ನವದೆಹಲಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೊದಲು ಮನೋಹರ್ ಪರಿಕ್ಕರ್ ಅವರ ನಿಧನದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.
ಅನಾರೋಗ್ಯದ ನಡುವೆಯೂ ಮನೋಹರ್ ಪರಿಕ್ಕರ್ ಅವರು ದೃಢತೆಯನ್ನು ಕಾಯ್ದುಕೊಂಡಿದ್ದರು. ಮನೋಹರ್ ಪರಿಕ್ಕರ್ ಸಾರ್ವಜನಿಕ ಜೀವನದಲ್ಲಿ ಬದ್ಧತೆ ಹಾಗೂ ಸಮರ್ಪಣಾ ಮನೋಭಾವನೆಗೆ ಸಾಕಾರವಾಗಿದ್ದರು. ಗೋವಾ ಹಾಗೂ ದೇಶದ ಜನತೆಗೆ ಅವರು ಮಾಡಿರುವ ಸೇನೆ ಎಂದಿಗೂ ಮರೆಯಲಾಗುವುದಿಲ್ಲ ಎಂದು ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ಮನೋಹರ್ ಪರಿಕ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಪರಿಕ್ಕರ್ ಓರ್ವ ಸಾಟಿಯಿಲ್ಲದ ನಾಯಕ ನಿಜವಾದ ದೇಶಭಕ್ತ ಮತ್ತು ಅಸಾಧಾರಣ ಆಡಳಿತಗಾರ. ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ದೇಶಕ್ಕೆ ಅವರು ಸಲ್ಲಿಸಿದ ಕಳಂಕರಹಿತ ಸೇವೆ ಮುಂದಿನ ಪೀಳಿಗೆಗೆ ನೆನಪಿನಲ್ಲುಳಿಯಲಿದೆ, ಅವರ ನಿಧನದಿಂದ ತೀವ್ರ ಬೇಸರವಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
2018 ರ ಫ್ರೆಬ್ರವರಿಯಲ್ಲಿ ಮನೋಹರ್ ಪರಿಕ್ಕರ್ ಅವರಿಗೆ ಪ್ಯಾಂಕ್ರಿಯಾಸ್ ಕ್ಯಾನ್ಸರ್ ಇರುವುದು ದೃಢವಾಗಿತ್ತು. ಕ್ಯಾನ್ಸರ್ ನ ಹೊರತಾಗಿಯೂ ಸಹ ಗೋವಾ ಮುಖ್ಯಮಂತ್ರಿ ಹುದ್ದೆಯನ್ನು ಮನೋಹರ್ ಪರಿಕ್ಕರ್ ಸಮರ್ಥವಾಗಿ ನಿಭಾಯಿಸಿ ಬಜೆಟ್ ಮಂಡಿಸಿದ್ದರು. ಕೊನೆ ಉಸಿರಿರುವವರೆಗೂ ಗೋವಾ ಜನತೆ ಸೇವೆ ಮಾಡುವುದಾಗಿ ಹೇಳಿದ್ದರು.
ಆರ್ ಎಸ್ಎಸ್ ನ ಹಿನ್ನೆಲೆ ಹೊಂದಿದ್ದ ಮನೋಹರ್ ಪರಿಕ್ಕರ್ ಐಐಟಿಯಿಂದ ಮೆಟಲರ್ಜಿ ವಿಷಯದಲ್ಲಿ ಪದವಿ ಪಡೆದಿದ್ದರು. ಅಕ್ಟೋಬರ್ 24, 2000 ರಲ್ಲಿ ಪ್ರಥಮ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ಅಧಿಕಾರ ವಹಿಸಿಕೊಂಡಿದ್ದರು. ಅವಧಿ ಪೂರ್ಣಗೊಂಡ ನಂತರ 2002 ರ ಜೂ.5 ರಂದು ಮತ್ತೊಮ್ಮೆ ಗೋವಾ ಮುಖ್ಯಮಂತ್ರಿಯಾಗಿ ಮರು ಆಯ್ಕೆಯಾದರು 2017 ರಲ್ಲಿ ಗೋವಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ಅವರು ಪ್ರಧಾನಿ ಮೋದಿ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮನೋಹರ್ ಪರಿಕ್ಕರ್DeathManohar Parrikarನಿಧನಪ್ರಧಾನಿ ಮೋದಿprime minister modiPresident Kovindರಾಷ್ಟ್ರಪತಿ ಕೋವಿಂದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


