ಬಿಜೆಪಿ ಪ್ರಾಬಲ್ಯದ ಭಯ: ಇದೇ ಮೊದಲ ಬಾರಿಗೆ 2 ವಿಧಾನಸಭಾ ಕ್ಷೇತ್ರಗಳಿಂದ ಒಡಿಶಾ ಸಿಎಂ ಸ್ಪರ್ಧೆ!
ಇದೇ ಮೊದಲ ಬಾರಿಗೆ ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ.

Published On :
ಒಡಿಶಾ: ಇದೇ ಮೊದಲ ಬಾರಿಗೆ ಒಡಿಶಾ ಮುಖ್ಯಮಂತ್ರಿ ಹಾಗೂ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ.
ಬಿಜೇಪುರ್ ವಿಧಾನಸಭಾ ಕ್ಷೇತ್ರ ಹಾಗೂ ಹಿಂಜಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಡಿ ಬಿಡುಗಡೆ ಮಾಡಿದೆ.
21 ಲೋಕಸಭಾ ಕ್ಷೇತ್ರಗಳ ಪೈಕಿ 9 ಕ್ಕೆ ಹಾಗೂ 147 ವಿಧಾನಸಭಾ ಕ್ಷೇತ್ರಗಳ ಪೈಕಿ 54 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹಿಂಜಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, 2000 ರಿಂದ ಇದೇ ಕ್ಷೇತ್ರದಿಂದ ಸತತವಾಗಿ ಆಯ್ಕೆಯಾಗುತ್ತಿದ್ದಾರೆ. ಆದರೆ ಈ ಬಾರಿ ಹಿಂಜಲಿ ಜೊತೆಗೆ ಬಿಜೇಪುರ್ ವಿಧಾನಸಭಾ ಕ್ಷೇತ್ರದಿಂದಲೂ ಸಹ ಸ್ಪರ್ಧಿಸುತ್ತಿದ್ದಾರೆ.
ಒಡಿಶಾದಲ್ಲಿ ಏ.11, 18, 23, 29 ರಂದು ಲೋಕಸಭೆ, ವಿಧಾನಸಭೆಗೆ ಮತದಾನ ನಡೆಯಲಿದೆ. ಪಶ್ಚಿಮ ಒಡಿಶಾದಲ್ಲಿ ಬಿಜೆಪಿಯ ಪ್ರಾಬಲ್ಯ ಹೆಚ್ಚುತ್ತಿರುವುದರಿಂದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಪಶ್ಚಿಮ ಪ್ರಾಂತ್ಯಕ್ಕೆ ಒಳಪಡಲಿರುವ ಬಿಜೇಪುರ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಧಾನಸಭಾ ಚುನಾವಣೆ2019 Lok Sabha elections2019 ರ ಲೋಕಸಭಾ ಚುನಾವಣೆOdisha CMassembly seatsಒಡಿಶಾ ಮುಖ್ಯಮಂತ್ರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


