ಜನಪ್ರಿಯತೆಯಲ್ಲಿ ಈಗಲೂ ಮೋದಿಯೇ ನಂ.1, ಆದರೆ...: ಐಎಎನ್ಎಸ್-ಸಿ-ವೋಟರ್ ಸಮೀಕ್ಷೆ ಹೇಳೋದೇನು?!
2019 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಜನಪ್ರಿಯತೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಲೂ ನಂ.1 ಆಗಿಯೇ ಇದ್ದಾರೆ.

Published On :
ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಜನಪ್ರಿಯತೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಲೂ ನಂ.1 ಆಗಿಯೇ ಇದ್ದಾರೆ.
ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಐಎಎನ್ಎಸ್-ಸಿ-ವೋಟರ್ ಸಮೀಕ್ಷೆಯ ವಿವರ ಬಹಿರಂಗವಾಗಿದೆ. ಈ ಸಮೀಕ್ಷೆಯ ಪ್ರಕಾರ ವೈಮಾನಿಕ ದಾಳಿಯಾದ ನಂತರವೂ ಪ್ರಧಾನಿ ಮೋದಿ ಜನಪ್ರಿಯತೆಯಲ್ಲಿ ಒಂದಷ್ಟು ಪ್ರಮಾಣ ಕಡಿಮೆಯಾಗಿದೆ. ಆದರೆ ಈಗಲೂ ಅವರೇ ಅತ್ಯಂತ ಜನಪ್ರಿಯ ನಾಯಕ.
ಇನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜನಪ್ರಿಯತೆಯಲ್ಲಿ ಸಣ್ಣ ಪ್ರಮಾಣದ ಏರಿಕೆಯಾಗಿದೆ. ಮಾ.4,5,6 ಹಾಗೂ 7 ವರೆಗೆ ಶೇ.60 ರಷ್ಟಿದ್ದ ಮೋದಿ ಜನಪ್ರಿಯತೆ ಮಾ.14 ರ ನಂತರ ಶೇ.56 ಕ್ಕೆ ಇಳಿಕೆಯಾಗಿದೆ. ಇನ್ನು ರಾಹುಲ್ ಗಾಂಧಿ ಜನಪ್ರಿಯತೆ ಶೇ.3 ರಿಂದ ಶೇ.7 ಕ್ಕೆ ಏರಿಕೆಯಾಗಿದೆ.
ಇನ್ನು ಮೋದಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜನರ ಸಂಖ್ಯೆ ಹಿಂದಿನಷ್ಟೇ ಇದ್ದು ಶೇ.50 ರಷ್ಟು ಜನರು ಮೋದಿ ಕಾರ್ಯವೈಖರಿ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಬಿಜೆಪಿ ಎನ್ ಡಿಎ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಬಲ್ಲದು ಎಂದು ಶೇ.40 ರಷ್ಟು ಜನರು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ ನಡೆದ ಸಮೀಕ್ಷೆಯಲ್ಲೂ ಎನ್ ಡಿಎ ಮುಂದಿನ ಬಾರಿ ಅಧಿಕಾರದ ಸನಿಹಕ್ಕೆ ಬರುವ ಲಕ್ಷಣಗಳು ನಿಚ್ಚಳವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


