ದೇಶ

ಗೋವಾ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ

ಗೋವಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪ್ರಮೋದ್ ಸಾವಂತ್ ಅವರು ಸೋಮವಾರ ರಾತ್ರಿಯೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗೋವಾ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ
ಪ್ರಮೋದ್ ಸಾವಂತ್
Published On :
ಪಣಜಿ: ಗೋವಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪ್ರಮೋದ್ ಸಾವಂತ್ ಅವರು ಸೋಮವಾರ ರಾತ್ರಿಯೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮನೋಹರ್‌ ಪರ್ರಿಕರ್‌ ಅವರ ಅಕಾಲಿಕ ನಿಧನದಿಂದ ತೆರವಾದ ಗೋವಾ ಮುಖ್ಯಮಂತ್ರಿ ಸ್ಥಾನಕ್ಕೆ ಗೋವಾ ವಿಧಾನಸಭಾ ಸ್ಪೀಕರ್‌ ಪ್ರಮೋದ್‌ ಸಾವಂತ್‌ ಅವರನ್ನು ಆಯ್ಕೆ ಮಾಡಲಾಗಿದ್ದು, ಮಿತ್ರ ಪಕ್ಷಗಳಾದ ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿಯ ಸುದಿನ್ ಧವಳಿಕರ್ ಮತ್ತು ಗೋವಾ ಪಾರ್ವಡ್ ಪಾರ್ಟಿಯ ವಿಜಯ್ ಸರ್ದೇಸಾಯಿ ಅವರನ್ನು ಉಪ ಮುಖ್ಯಮಂತ್ರಿಗಳಾಗಿ ನೇಮಕ ಮಾಡಲಾಗಿದೆ.
ಕಾಂಗ್ರೆಸ್ ಸರ್ಕಾರ ರಚನೆಗೆ ಯತ್ನಿಸುತ್ತಿರುವ ಹಿನ್ನಲೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡದಿರಲು ಇಂದು ರಾತ್ರಿಯೇ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ರೇಸ್​ನಲ್ಲಿ ಬಿಜೆಪಿಯ ಹಿರಿಯ ನಾಯಕರಾದ ವಿಶ್ವಜಿತ್ ರಾಣೆ ಮತ್ತು ಪ್ರಮೋದ್ ಸಾವಂತ್ ಹೆಸರುಗಳು ಪ್ರಮುಖವಾಗಿ ಕೇಳಿ ಬಂದಿದ್ದವು. ಇದರಿಂದ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿಯ ಆಯ್ಕೆ ಕಗ್ಗಂಟಾಗಿತ್ತು. ಪಣಜಿಯ ತಾರಾ ಹೊಟೇಲ್‍ವೊಂದರಲ್ಲಿ ನಿನ್ನೆ ರಾತ್ರಿಯಿಂದ ಆರಂಭವಾದ ಸಭೆಯಲ್ಲಿ ಇದೀಗ ಪ್ರಮೋದ್ ಸಾವಂತ್ ಅವರಿಗೆ ಮುಖ್ಯಮಂತ್ರಿ ಹುದ್ದೆವಹಿಸಲು ತೀರ್ಮಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.