ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ತೀವ್ರ ಶೆಲ್ಲಿಂಗ್; ಯೋಧ ಹುತಾತ್ಮ, ಹಲವರಿಗೆ ಗಾಯ
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಇಂದೂ ಕೂಡ ಪಾಕಿಸ್ತಾನ ಸೇನೆ ತೀವ್ರ ಶೆಲ್ಲಿಂಗ್ ಮತ್ತು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

Published On :
ಶ್ರೀನಗರ: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಇಂದೂ ಕೂಡ ಪಾಕಿಸ್ತಾನ ಸೇನೆ ತೀವ್ರ ಶೆಲ್ಲಿಂಗ್ ಮತ್ತು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಕಾಶ್ಮೀರದ ಸುಂದರ್ ಬನಿ ಸೆಕ್ಟರ್ ನ ಕೆರಿ ಬಟ್ಟಲ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ತೀವ್ರ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿ ನಡೆಸುತ್ತಿದೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ಕೂಡ ತಕ್ಕ ಉತ್ತರ ನೀಡುತ್ತಿದ್ದು, ತೀವ್ರ ಗುಂಡಿನ ದಾಳಿ ನಡೆಸುತ್ತಿದೆ. ಹುತಾತ್ಮ ಯೋಧರ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಶ್ರೀನಗರSrinagarPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರಕದನ ವಿರಾಮ ಉಲ್ಲಂಘನೆಭಾರತೀಯ ಸೇನೆcease fire violationJammu And Lashmir
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


