ಗೋವಾ ನೂತನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪದಗ್ರಹಣ: ಮಿತ್ರ ಪಕ್ಷಗಳಿಗೆ 2 ಡಿಸಿಎಂ ಹುದ್ದೆ!
ಮನೋಹರ್ ಪರಿಕ್ಕರ್ ನಿಧನದಿಂದ ತೆರವಾಗಿದ್ದ ಗೋವಾ ಮುಖ್ಯಮಂತ್ರಿ ಹುದ್ದೆಗೆ ಪ್ರಮೋದ್ ಸಾವಂತ್ ಆಯ್ಕೆಯಾಗಿದ್ದು, ಮಾ.18 ರಂದು ತಡರಾತ್ರಿ 1:51 ರ ವೇಳೆಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ

Published On :
ಮನೋಹರ್ ಪರಿಕ್ಕರ್ ನಿಧನದಿಂದ ತೆರವಾಗಿದ್ದ ಗೋವಾ ಮುಖ್ಯಮಂತ್ರಿ ಹುದ್ದೆಗೆ ಪ್ರಮೋದ್ ಸಾವಂತ್ ಆಯ್ಕೆಯಾಗಿದ್ದು, ಮಾ.18 ರಂದು ತಡರಾತ್ರಿ 1:51 ರ ವೇಳೆಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅತ್ತ ಮನೋಹರ್ ಪರಿಕ್ಕರ್ ಅವರ ನಿಧನದ ವಾರ್ತೆ ಕೇಳುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಸರ್ಕಾರ ರಚನೆ ಕಸರತ್ತಿಗೆ ಮುಂದಾಗಿ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇತ್ತ ಬಿಜೆಪಿ ಪಾಳಯದಲ್ಲೂ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತ್ವರಿತವಾಗಿ ನೂತನ ಮುಖ್ಯಮಂತ್ರಿಯ ಘೋಷಣೆ ಹಾಗೂ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಬಿರುಸಿನಿಂದ ನಡೆದಿತ್ತು. ಅಂತಿಮವಾಗಿ ಮನೋಹರ್ ಪರಿಕ್ಕರ್ ಅವರೇ ರಾಜಕೀಯಕ್ಕೆ ಕರೆ ತಂದಿದ್ದ ಗೋವಾದ ಸ್ಪೀಕರ್ ಪ್ರಮೋದ್ ಸಾವಂತ್ ಮನೋಹರ್ ಪರಿಕ್ಕರ್ ಅವರ ಅಂತ್ಯಸಂಸ್ಕಾರ ನಡೆದ ಕೆಲವೇ ಗಂಟೆಗಳಲ್ಲಿ ಅವರ ರಾಜಕೀಯ ಉತ್ತರಾಧಿಕಾರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈಗಾಗಲೇ ಮನೋಹರ್ ಪರಿಕ್ಕರ್ ಅವರ ಸಚಿವ ಸಂಪುಟದಲ್ಲಿದ್ದ 11 ಶಾಸಕರು ಪ್ರಮೋದ್ ಸಾವಂತ್ ಜೊತೆಗೆ ಸಚಿವರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾತ್ರಿ 11 ಗಂಟೆಗೆ ನಡೆಯಬೇಕಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಕಾರಣಾಂತರಗಳಿಂದ ರಾತ್ರಿ 1:51 ಕ್ಕೆ ನಡೆಯಿತು.
ಇನ್ನು ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ಬಿಜೆಪಿ, ಎರಡು ಉಪಮುಖ್ಯಮಂತ್ರಿ ಹುದ್ದೆಯನ್ನೂ ಸೃಷ್ಟಿಸಿದ್ದು, ಬಿಜೆಪಿಗೆ ಬೆಂಬಲ ನೀಡಿರುವ ಎಂಜಿಪಿ ಹಾಗೂ ಜಿಎಫ್ ಪಿಯ ಶಾಸಕರಿಗೆ ಉಪಮುಖ್ಯಮಂತ್ರಿ ಹುದ್ದೆಗಳನ್ನು ನೀಡಿದೆ.
ಪದಗ್ರಹಣದ ಬಳಿಕ ಮಾತನಾಡಿರುವ ಪ್ರಮೋದ್ ಸಾವಂತ್, ಪಕ್ಷ ನನ್ನ ಹೆಗಲಿಗೆ ಬಹುದೊಡ್ಡ ಜವಾಬ್ದಾರಿಯನ್ನು ಹೊರೆಸಿದೆ. ನಾನು ಈ ರಾಜಕೀಯದಲ್ಲಿ ಏನಾದರೂ ಆಗಿದ್ದರೆ ಅದು ಮನೋಹರ್ ಪರಿಕ್ಕರ್ ಅವರಿಂದಲೇ, ಅವರೇ ನನ್ನನ್ನು ರಾಜಕೀಯವಾಗಿ ಬೆಳೆಸಿದವರು, ನಾನು ಗೋವಾ ವಿಧಾನಸಭೆ ಸ್ಪೀಕರ್ ಆಗಿದ್ದೂ ಸಹ ಮನೋಹರ್ ಪರಿಕ್ಕರ್ ಅವರಿಂದಲೇ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


